ಸಿದ್ದಾಪುರ, ಸೆ. ೨೭: ಸಿದ್ದಾಪುರದ ವಾಹನ ಚಾಲಕರ ಮಜ್ದೂರ್ ಸಂಘದ ವತಿಯಿಂದ ೩೨ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವನ್ನು ಅ. ೧ ರಂದು ಅದ್ಧೂರಿಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಸತೀಶ್ ತಿಳಿಸಿದ್ದಾರೆ. ಸಿದ್ದಾಪುರದ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. ೧ ರಂದು ಬೆಳಿಗ್ಗೆ ೯ ಗಂಟೆಗೆ ಸೂದನ ಸತೀಶ್ ಅವರು ಧ್ವಜಾರೋಹಣ ನೆರವೇರಿಸಲಿದ್ದು, ೯.೩೦ ಗಂಟೆಗೆ ಕಾರ್ಯಕ್ರಮವನ್ನು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಲಿದ್ದಾರೆ. ಬಳಿಕ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮ ನಡೆಯಲಿದ್ದು, ೧೦.೩೦ ಗಂಟೆಗೆ ಜಿಲ್ಲಾಮಟ್ಟದ ಸೈಕಲ್ ನಿಧಾನ ಚಲಿಸುವ ಸ್ಪರ್ಧೆ, ರಸ್ತೆ ಓಟ, ಮಡಿಕೆ ಒಡೆಯುವ ಸ್ಪರ್ಧೆ ಹಾಗೂ ಸಂಗೀತ ಖುರ್ಚಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಜಿಲ್ಲಾಮಟ್ಟದ ನೃತ್ಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಆಟೋರಿಕ್ಷಾ ಅಲಂಕಾರ ಸ್ಪರ್ಧೆ ನಡೆಯಲಿದೆ. ಸಂಜೆ ೪ ಗಂಟೆಗೆ ವಿವಿಧ ಕಾರ್ಯಕ್ರಮಗಳ ಬಹುಮಾನ ವಿತರಣೆ ನಡೆಯಲಿದೆ ಎಂದರು. ಸಂಘದ ನಿರ್ದೇಶಕರಾದ ಜಿಮ್ಮಿ ಸಿಕ್ವೇರಾ ಮಾತನಾಡಿ, ಸಂಜೆ ೭ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೂದನ ಸತೀಶ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷರಾದ ಪಳನಿಸ್ವಾಮಿ, ಜಿ.ಪಂ. ಮಾಜಿ ಸದಸ್ಯರಾದ ವಿಜು ಸುಬ್ರಮಣಿ, ಜಿ.ಜೆ.ಪಿ. ತಾಲೂಕು ಪ್ರಧಾನ ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಪ್ರಮುಖರಾದ ಜೋಸೆಫ್ ಶ್ಯಾಂ, ಚುಮ್ಮಿ ಪೂವಯ್ಯ, ವಕೀಲರಾದ ರತ್ನಾಕರ ಶೆಟ್ಟಿ ಭಾಗವಹಿಸಲಿದ್ದಾರೆ. ರಾತ್ರಿ ಕೋಜಿಕ್ಕೋಡ್ನ ಸಾರಂಗ್ ತಂಡದಿAದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆ.ಎಂ. ಅನೀಶ್, ಆಚರಣಾ ಸಮಿತಿ ಅಧ್ಯಕ್ಷರಾದ ರತೀಶ್ ಎಂ.ಹೆಚ್., ಕಾರ್ಯದರ್ಶಿ ವಿನುಕುಮಾರ್ ವಿ.ಎಸ್.,೦೦೦೦೦೦೦೦೦೦೦೦೦೦೦೦೦ ಸದಸ್ಯರಾದ ಶರವಣ, ರವಿ, ಅನಿಲ್ ಕುಮಾರ್ ವಿ.ಎಸ್., ಪ್ರತೀಶ, ರಾಧಾಕೃಷ್ಣ ಹಾಜರಿದ್ದರು.