ಮೂರ್ನಾಡು, ಸೆ. ೨೭: ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ ೧೭ನೇ ವರ್ಷದ ಓಣಂ ಹಬ್ಬವು ತಾ. ೨೮ ರಂದು (ಇಂದು) ನಡೆಯಲಿದೆ.

ಮೂರ್ನಾಡುಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬದ ಪ್ರಯುಕ್ತ ಬೆಳಿಗ್ಗೆ ೭.೩೦ ಗಂಟೆಗೆ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆ ನಡೆಯಲಿದೆ. ನಂತರ ಹಿಂದೂ ಮಲಯಾಳಿ ಸಮುದಾಯದವರಿಂದ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆಯುವ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಳ್ಳಲಿದ್ದಾರೆ.

ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಅಧ್ಯಕ್ಷತೆ ವಹಿಸುವ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿ.ಎಂ ವಿಜಯನ್, ಜಿಲ್ಲಾ ಪೊಲೀಸ್ ವೃತ್ತ ನೀರಿಕ್ಷಕ ಹೆಚ್.ವಿ. ಚಂದ್ರಶೇಖರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಮಡಿಕೇರಿ ಎಸ್.ಎನ್.ಡಿ.ಪಿ ಅಧ್ಯಕ್ಷ ಟಿ.ಆರ್. ವಾಸುದೇವ್, ಮಡಿಕೇರಿ ಕೆ.ಎನ್.ಎಸ್.ಎಸ್.ನ ಅಧ್ಯಕ್ಷ ಕೆ.ಕೆ. ಹರೀಶ್ ಕುಮಾರ್, ಜಿಲ್ಲಾ ಸಮಿತಿಯ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್‌ರೈ, ಹೊದ್ದೂರುಗ್ರಾಮ ಪಂಚಾಯಿತಿಅಧ್ಯಕ್ಷ ಹೆಚ್.ಎ. ಹಂಸ ಹೊದವಾಡ, ಹಾಗೂ ವಿಶೇಷ ಆಹ್ವಾನಿತರಾಗಿ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸದಸ್ಯರಾದ ಆರ್. ಗಿರೀಶ್, ಕೆ.ವಿ. ಸುಬ್ರಮಣಿ ಮತ್ತು ರತಿಕೇಶನ್ ಅವರುಗಳು ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಓಣಂ ಸಧ್ಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.