ೆÆÃಮವಾರಪೇಟೆ,ಸೆ.೨೭: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲದ ಎಸ್.ಸಿ. ಮೋರ್ಚಾ ವತಿಯಿಂದ ತಾ. ೨೯ರಂದು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಮಂಡಲ ಎಸ್‌ಸಿ ಮೋರ್ಚಾದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೨೯ರಂದು ಬೆಳಿಗ್ಗೆ ೧೦.೩೦ಕ್ಕೆ ಇಲ್ಲಿನ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಸ್ತಿçà ರೋಗ ತಜ್ಞರು, ಮೂಳೆ, ಇಎನ್‌ಟಿ, ದಂತ ಹಾಗೂ ವೈದ್ಯಕೀಯ ತಜ್ಞರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಇದರೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಪಿ.ಎಂ. ರವಿ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಶಿಬಿರದಲ್ಲಿ ಭಾಗಿಯಾಗಿ ಉಚಿತವಾಗಿ ತಮ್ಮ ಆರೋಗ್ಯ ತಪಾಸಣೆ ನಡೆಸಿಕೊಳ್ಳಬಹುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾದ ಕೆಂಚೇಶ್ವರ್, ಎಚ್.ಡಿ. ಗಣೇಶ್, ಕಾರ್ಯದರ್ಶಿ ಎಂ. ಕಾಳಯ್ಯ, ಸದಸ್ಯರಾದ ಎನ್.ಸಿ. ಗೋವಿಂದರಾಜು ಇದ್ದರು.