ಕೂಡಿಗೆ, ಸೆ. ೨೮: ಹೆಬ್ಬಾಲೆ ಕಾಲೇಜಿನಲ್ಲಿ ನಡೆದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಬಾಲಕರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕರು ಮತ್ತು ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಟೂರ್ನಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ತಿಳಿಸಿದ್ದಾರೆ.

ತಂಡದ ವ್ಯವಸ್ಥಾಪಕರಾಗಿ ಉಪನ್ಯಾಸಕರಾದ ಎಂ.ಟಿ. ರಮೇಶ್ ಮತ್ತು ನಂದಿನಿ ಕಾರ್ಯ ನಿರ್ವಹಿಸಿದರು.