ಪೊನ್ನಂಪೇಟೆ, ಸೆ. ೨೮: ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್. ಘಟಕದ ವತಿಯಿಂದ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಆಚರಿಸಲಾಯಿತು.
ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಎನ್.ಎಸ್.ಎಸ್. ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಯ ಸುತ್ತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ, ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು.
ಎನ್.ಎಸ್.ಎಸ್. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ಭ್ರಷ್ಟಾಚಾರದ ವಿರುದ್ಧ ಜಾಗೃತಿಯನ್ನು ಮೂಡಿಸಿ, ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡಾ. ಪಿ.ಪಿ. ಸವಿತಾ, ಎನ್.ಎಸ್.ಎಸ್. ಅಧಿಕಾರಿಗಳಾದ ಎಂ.ಎ. ಕುಶಾಲಪ್ಪ, ಪೂಜಾ ಶರಣು, ಎನ್.ಎಸ್.ಎಸ್. ಸ್ವಯಂ ಸೇವಕ, ಸೇವಕಿಯರು ಹಾಜರಿದ್ದರು.