ಕೂಡಿಗೆ, ಸೆ. ೨೮: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಡಿಕೇರಿ, ಇದರ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ತಾಲೂಕಿ ನಿಂದ ಕೂಡಿಗೆ ಎಸ್.ಆರ್. ಸುನಿಲ್ ರಾವ್ ಆಯ್ಕೆಗೊಂಡಿದ್ದು, ಇದರ ಅಂಗವಾಗಿ ಕೂಡಿಗೆಯಲ್ಲಿ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು ವಿಜಯೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷ, ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ನಿರ್ದೇಶಕರಾದ ಕೆ.ಪಿ. ರಾಜು ಎಸ್.ಎಸ್. ಕೃಷ್ಣ, ರಾಮಚಂದ್ರ, ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್, ಕೂಡಿಗೆ ಗ್ರಾ.ಪಂ. ಸದಸ್ಯ ಅನಂತ, ಶಿವಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಮೂಡ್ಲಿಗೌಡ, ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪುರುಷೋತ್ತಮ್, ಹನುಮ ಸೇವಾ ಸಮಿತಿ ಕಾರ್ಯದರ್ಶಿ ಧರ್ಮ, ನಿವೃತ್ತ ಶಿಕ್ಷಕ ರಾಜೇಗೌಡ, ನಕುಲ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.