ಮೂರ್ನಾಡು, ಸೆ. ೨೯: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಮೂರ್ನಾಡುವಿನಲ್ಲಿ ಅದ್ದೂರಿ ಆಯುಧ ಪೂಜಾ ಮಹೋತ್ಸವ ಅ.೧ರಂದು ನಡೆಯಲಿದೆ.

ಇಲ್ಲಿನ ಮೂರ್ನಾಡು ಪ್ರೌಢಶಾಲೆಯ ಮೈದಾನ ಹಾಗೂ ನಾಡ್‌ಮಂದ್‌ನಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ ೩೨ನೇ ವರ್ಷದ ಆಯುಧ ಪೂಜೆಯ ಸಂಭ್ರಮಾಚರಣೆಗೆ ಮೂರ್ನಾಡು ಪಟ್ಟಣ ಅಣಿಯಾಗುತ್ತಿದೆ.

ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘವು ಆಯೋಜಿಸುತ್ತಿರುವ ವಿಜೃಂಭಣೆಯ ಆಯುಧ ಪೂಜಾ ಕಾರ್ಯಕ್ರಮವು ಅಪರಾಹ್ನ ೨ ಗಂಟೆಗೆ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯೊಂದಿಗೆ ಪ್ರಾರಂಭಗೊAಡು, ನಂತರ ಮುಖ್ಯರಸ್ತೆಯಲ್ಲಿ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಅಲಂಕೃತ ವಾಹನಗಳೊಂದಿಗೆ ಈ ಬಾರಿ ವಿಶೇಷವಾಗಿ ಕ್ಯಾಲಿಕಟ್‌ನ ಹರಿಶ್ರೀ ಕಲಾ ಸಮಿತಿಯ ಬೊಂಬೆ ಕುಣಿತ ಮತ್ತು ವಾದ್ಯಗೋಷ್ಠಿ ಮೆರವಣಿಗೆಯ ಕಳೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಸಂಜೆಯ ವೇಳೆಗೆ ವಿನೋದ್‌ಕರ್ಕೆರ ಅವರ ಸಿಗ್ನೇಚರ್ ಡ್ಯಾನ್ಸ್ ಕಂಪನಿಯ ಡಿಕೆಡಿ ವಿಜೇತ ರಾಹುಲ್‌ರಾವ್ ಮತ್ತು ಸಂಗಡಿಗರ ನೃತ್ಯ ಕಾರ್ಯಕ್ರಮ ಮೂರ್ನಾಡಿನ ಜಲಜ ನಾಗರಾಜ್ ಅವರ ಭಾರತೀಯ ನೃತ್ಯ ಕಲಾ ಶಾಲೆಯ ಕಲಾವಿದರಿಂದ ನೃತ್ಯ ಕಾರ್ಯಕ್ರಮ ಹಾಗೂ ಮೂರ್ನಾಡಿನ ಚರಣ್ ಅವರ ಸ್ಟೆಪ್ ಅಪ್ ಗ್ರೂಪ್‌ನ ಕಲಾವಿದರಿಂದ ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಮೊದಲು ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಲಿದ್ದು, ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್‌ರೈ, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್, ಮೂರ್ನಾಡು ಕಂದಾಯ ಇಲಾಖೆಯ ಗ್ರಾಮಾಡಳಿತಾಧಿಕಾರಿ ಅಕ್ಷತ ಬಿ. ಶೆಟ್ಟಿ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ವೀರಾಜಪೇಟೆಯ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮತ್ತು ವಕೀಲರಾದ ಬಿ.ಎ. ಕೃಷ್ಣಮೂರ್ತಿ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಮೂರ್ನಾಡು ಪ್ರೌಢಶಾಲೆಯ ಮುಖ್ಯಶಿಕ್ಷಕಿ ಎಸ್.ಎಂ. ದೇಚಮ್ಮ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಬಿ.ಎಸ್. ಪುಷ್ಪಾವತಿ, ಬೆಂಗಳೂರಿನ ಸಿಗ್ಮಾ ನೆಟ್‌ವರ್ಕ್ನ ಮಾಲೀಕ ಅವರೆಮಾದಂಡ ಶರಣ್ ಪೂಣಚ್ಚ, ತ್ರಿನೇತ್ರ ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞÂರಾಮ, ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಚೌರೀರ ಜಗತ್ ತಿಮ್ಮಯ್ಯ, ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ, ಮೂರ್ನಾಡು ಮಾರುತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುಂಡAಡ ಅಪ್ಪಚ್ಚು, ಮುಸ್ಲಿಂ ಜಮಾಅತ್‌ನ ಅಧ್ಯಕ್ಷ ಕೆ.ಎ. ಅಬ್ದುಲ್ ಮಜೀದ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಸಂಜೀವಿನಿ ಘನ ತ್ಯಾಜ್ಯ ವಿಂಗಡಣಾ ಘಟಕದ ಮಹಿಳಾ ಸಿಬ್ಬಂದಿಗಳು ಮತ್ತು ಕಳೆದ ಸಾಲಿನಲ್ಲಿ ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೩ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಲಾಗುವುದು. ಅಲಂಕೃತಗೊAಡ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರುಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸಾರ್ವಜನಿಕರಿಗೆ ರಾತ್ರಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗಿದೆ.