ಕೂಡಿಗೆ, ಸೆ. ೨೯: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಗೆ ವಾಲಿದ ಘಟನೆ ಹಾರಂಗಿಯಲ್ಲಿ ನಡೆದಿದ್ದು, ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚೆನ್ನೆöÊನಿಂದ ಮೈಸೂರಿಗೆ ರೈಲಿನಿಂದ ಬಂದ ವಿದ್ಯಾರ್ಥಿಗಳು ಅಲ್ಲಿಂದ ಹಾರಂಗಿಗೆ ಪ್ರವಾಸಿ ಬಸ್‌ನಲ್ಲಿ ಬಂದು ಅಣೆಕಟ್ಟಿಗೆ ಭೇಟಿ ನೀಡಿ ಹಿಂತಿರುಗುವ ಸಂದರ್ಭ ರಸ್ತೆ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಬಸ್ ವಾಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಸ್ಥಳೀಯರು ವಿದ್ಯಾರ್ಥಿಗಳನ್ನು ರಕ್ಷಿಸಿ ಮತ್ತೊಂದು ವಾಹನಕ್ಕೆ ಸ್ಥಳಾಂತರಿಸಿದರು. ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಯಾವುದೇ ಸೂಚನ ಫಲಕ ಅಳವಡಿಸದ ಕಾರಣದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.