ಚೆಯ್ಯಂಡಾಣೆ, ಸೆ. ೨೯ : ನಾಪೋಕ್ಲು ಸಮೀಪದ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಬಲ್ಲಮಾವಟಿ ವರ್ತುಲ ಮಟ್ಟದ ಅಂಗನವಾಡಿ ಕೇಂದ್ರಗಳ ಪೋಷಣ್ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಹೇಮಾವತಿ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿ ವರ್ಷ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಸೇರಿದಂತೆ ಇನ್ನಿತರ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿರುವುದು ಅಂಗನವಾಡಿ ಕಾರ್ಯಕರ್ತೆಯ ಕಾರ್ಯ ವೈಖರಿಯನ್ನು ಬಿಂಬಿಸುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಮಾತನಾಡಿ ಆರೋಗ್ಯವೇ ಭಾಗ್ಯ ಎಂಬAತೆ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಮಾಡಿ ಅದರಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಮಾಹಿತಿಯನ್ನು ನೀಡಿದಾಗ ಫಲಾನುಭವಿಗಳು ಅಪೌಷ್ಟಿಕತೆಯಿಂದ ಮುಕ್ತರಾಗಬಹುದೆಂದು ತಿಳಿಸಿದರು.
ಕೊಳಕೇರಿ ದವಸ ಭಂಡಾರದ ಅಧ್ಯಕ್ಷರಾದ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಈ ಅಂಗನವಾಡಿ ಕೇಂದ್ರದಲ್ಲಿ ಪ್ರತಿವರ್ಷ ಅಚ್ಚುಕಟ್ಟಾಗಿ ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಇದರಿಂದ ಫಲಾನುಭವಿಗಳಿಗೆ ತುಂಬಾ ಉಪಯುಕ್ತವಾಗಿದ್ದು ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಅರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಅವರು ಮಾತನಾಡಿ ಪೌಷ್ಟಿಕ ಆಹಾರದ ಜೊತೆಗೆ ಕಾಲಕಾಲಕ್ಕೆ ಚುಚ್ಚುಮದ್ದನ್ನು ಸಹ ಪಡೆದುಕೊಳ್ಳಬೇಕೆಂದು ತಿಳಿಸಿದರು. ಪೊಮ್ಮಕ್ಕಡ ಕೂಟದ ಸದಸ್ಯರಾದ ಅಜ್ಜೆಟಿರ ರಾಣಿ ಅವರು ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ವ್ಯಾಪ್ತಿಯ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಅನ್ನ ಪ್ರಾಶನ ನಡೆದ ಬಳಿಕ ಅಂಗನವಾಡಿ ಕೇಂದ್ರದ ವಿವನ್ ಪೊನ್ನಪ್ಪ ಮಗುವಿನ ಹುಟ್ಟು ಹಬ್ಬ ಆಚರಿಸಿ. ಮಗುವಿನ ತಾಯಿ ಸೋನಿ ಇವರ ಹೆಸರಿನಲ್ಲಿ ಗಿಡ ನೆಟ್ಟು ಸಂಭ್ರಮಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಂದ ಕಾಳುಗಳಿಂದ ವಿವಿಧ ಸ್ಪರ್ಧೆ, ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ತಾಯಂದಿರು ಪರದೆಯ ಹೊರಗಡೆಯಿಂದ ತಮ್ಮ ಮಕ್ಕಳ ಪಾದ ಸ್ಪರ್ಶ ಮಾಡಿ ತಮ್ಮ ಮಕ್ಕಳನ್ನು ಗುರುತು ಹಿಡಿಯುವ ಸ್ಪರ್ಧೆ ವಿಭಿನ್ನವಾಗಿ ಮೂಡಿ ಬಂದು ನೆರೆದವರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕಾಂಶ ಹೊಂದಿರುವ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಬಲ್ಲಮಾವಟಿ ವರ್ತುಲದ ಅಂಗನವಾಡಿ ಕಾರ್ಯಕರ್ತೆಯರು, ಭಗವತಿ ಸ್ತಿçà ಶಕ್ತಿ ಗುಂಪಿನ ಅಧ್ಯಕ್ಷರು, ಸದಸ್ಯರು, ಬಾಲವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು, ಮಕ್ಕಳ ತಾಯಂದಿರು,ಗ್ರಾಮಸ್ಥರು ಅಂಗನವಾಡಿ ಸಹಾಯಕಿಯವರು ಪುಟಾಣಿ ಮಕ್ಕಳು ಹಾಜರಿದ್ದರು.