ಕೂಡಿಗೆ, ಸೆ. ೨೯: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರಿಗೆ ಸನ್ಮಾನÀ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ ಪಿ.ಎನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಎಂ.ಎಸ್. ಕಾರ್ಯದರ್ಶಿ ಎಂ.ಆರ್. ಶೇಷಗಿರಿ, ಗ್ರಾ.ಪಂ. ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು. ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರಾದ ರಾಮು, ಅರಗಿಣಿ ಅವÀರನ್ನುಸನ್ಮಾನಿಸಿ ಗೌರವಿಸಲಾಯಿತು.