ವೀರಾಜಪೇಟೆ, ಸೆ. ೨೯: ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬAಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.

ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಮಾನವನಿಗೆ ಒಂದು ವರವಾಗಿದ್ದು, ಪರಿಸರದಲ್ಲಿ ನಾವು ಕಲಿಯುವ ಪಾಠ ಆರೋಗ್ಯವನ್ನು ಉತ್ತಮಪಡಿಸುವುದಲ್ಲದೆ ಸುಂದರ ಸಮಾಜದ ಸೃಷ್ಟಿಗೂ ಕಾರಣವಾಗುತ್ತದೆ ಎಂದರು.

ಉಪನ್ಯಾಸ ನೀಡಿದ ಬರಹಗಾರ್ತಿ ಉಷಾ ಪ್ರೀತಂ ಮಾತನಾಡಿ, ಕೊಡಗು ಪ್ರಕೃತಿ ಸೌಂದರ್ಯದ ನಾಡು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕಾಗಿದೆ. ನಮ್ಮ ಪ್ರಕೃತಿ ನಮ್ಮ ಪರಿಸರ ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ. ಆಗ ಮಾತ್ರ ಸ್ವಚ್ಛಂದ ಆರೋಗ್ಯಯುತ ಪರಿಸರ ನಿರ್ಮಾಣ ಸಾಧ್ಯ ಎಂದರು.

ಪದವಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕಿ ಹೇಮ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಮಾತನಾಡಿ, ತಂತ್ರಜ್ಞಾನ ಎಷ್ಟೇ ಮುಂದುವರೆದÀರೂ ಪ್ರಕೃತಿಯನ್ನು ಉಳಿಸದಿದ್ದಲ್ಲಿ ಮಾನವ ಜೀವಿಸಲು ಸಾಧ್ಯವಿಲ್ಲ ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ಸಂಚಾಲಕಿ ಸೌಮ್ಯ ಉಪಸ್ಥಿತರಿದ್ದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ನೇಚರ್ ಕ್ಲಬ್ ಘಟಕದ ವಿದ್ಯಾರ್ಥಿಗಳು ಹಾಜರಿದ್ದರು.