ವೀರಾಜಪೇಟೆ, ಸೆ. ೨೯: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ೧೭ ವರ್ಷ ವಯೋಮಾನದ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸಿದೆ.
ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ವೀರಾಜಪೇಟೆಯ ಪ್ರಗತಿ ಪ್ರೌಢಶಾಲೆಯ ಧ್ವಾನಿ ಬಿ.ಆರ್, ಝಕರಿಯ ಸೆಫಿನ್ ವಿ.ಯು, ಸಾನ್ವಿ ಎಸ್.ಭಟ್, ಗನ್ಯಶ್ರೀ ಎಂ.ಜಿ ಹಾಗೂ ವಿನ್ಯಾ ಎನ್.ಎಸ್ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೋಲಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರಗತಿ ಶಾಲೆಯ ವಿದ್ಯಾರ್ಥಿನಿಯರು ಪ್ರತಿನಿಧಿಸಲಿದ್ದಾರೆ.