ಮಡಿಕೇರಿ, ಸೆ. ೨೯: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ನಡೆಯುತ್ತಿರುವ ಸಮೀಕ್ಷಾ ಕಾರ್ಯಕ್ಕೆ ಸಂವಿಧಾನವನ್ನು ಅರ್ಥಮಾಡಿಕೊಳ್ಳದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಂವಿಧಾನದ ಆಶಯದಂತೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರುಗಳನ್ನು ಮುಂದೆ ತರುವ ನಿಟ್ಟಿನಲ್ಲಿ ಈ ಸಮೀಕ್ಷಾ ಕಾರ್ಯವನ್ನು ನಡೆಸಲಾಗುತ್ತಿದೆ. ಆಯೋಗವು ಸಮೀಕ್ಷೆ ನಡೆಸಿ ನೀಡುವ ವರದಿ ಅನ್ವಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸುತ್ತದೆ. ಉಚ್ಚ ನ್ಯಾಯಾಲಯ ಕೂಡ ಈ ಸಮೀಕ್ಷೆಯನ್ನು ಎತ್ತಿ ಹಿಡಿದಿದೆ. ಹೀಗಿರುವಾಗ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಮೀಕ್ಷೆ ಬಗ್ಗೆ ಅಪಪ್ರಚಾರ ಮಾಡುತ್ತಾ ಗೊಂದಲ ಏಳನೇ ಪುಟಕ್ಕೆ
ಮೊದಲನೇ ಪುಟದಿಂದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದವರನ್ನು ಮುಂದೆ ತರಬಾರದು ಎಂಬುದು ಬಿಜೆಪಿ ಹಾಗೂ ಜೆಡಿಎಸ್ನ ಉದ್ದೇಶವಾಗಿದೆ ಎಂದು ಪೊನ್ನಣ್ಣ ಆರೋಪಿಸಿದರು. ಈ ಸಮೀಕ್ಷೆಯಲ್ಲಿ ಎಲ್ಲರೂ ಕೂಡ ಭಾಗವಹಿಸಬೇಕೆಂದ ಅವರು ಜನರ ದಾರಿ ತಪ್ಪಿಸುವ ಕೆಲಸವನ್ನು ಯಾರು ಕೂಡ ಮಾಡಬಾರದು. ಸಂವಿಧಾನವನ್ನು ಅರ್ಥಮಾಡಿಕೊಂಡವರು ಈ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ ಎಂದು ಪೊನ್ನಣ್ಣ ನುಡಿದರು.
ಬಿಜೆಪಿಯವರ ಪ್ರತಿಭಟನೆ ಸಂಬAಧ ಮಾತನಾಡಿದ ಪೊನ್ನಣ್ಣ, ಅತೀ ಹೆಚ್ಚು ಮಳೆಯಿಂದಾಗಿ ರಸ್ತೆಗಳು ಹಾಳಾಗಿವೆ. ರಸ್ತೆಗಳು ಹಾಳಾಗಲು ತಾನಾಗಲಿ, ಸರ್ಕಾರವಾಗಲಿ ಕಾರಣವಲ್ಲ. ಆದರೂ ರಸ್ತೆಯನ್ನು ಸರಿಪಡಿಸಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದ್ದು, ಆ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ. ಜನರ ಪ್ರಶ್ನೆಗಳಿಗೆ ಉತ್ತರಿಸುವುದು ತನ್ನ ಕರ್ತವ್ಯ ವಾಗಿದ್ದು ಖಂಡಿತವಾಗಿ ಉತ್ತರಿಸುತ್ತೇನೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದರು. ಟೀಕೆ ಮಾಡಿದರು ಅದರಲ್ಲಿ ಅರ್ಥವಿರಬೇಕು. ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ನಿಂತಿದೆ; ಮಳೆಯಿಂದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ರಸ್ತೆ ಸರಿಪಡಿಸಿ ಎಂದು ಪ್ರತಿಭಟನೆ ಮಾಡುತ್ತಾರಲ್ಲ ಅವರಿಗೆ ಈ ಕನಿಷ್ಠ ಜ್ಞಾನ ಇಲ್ಲವೆಂದು ಪೊನ್ನಣ್ಣ ಪ್ರಶ್ನಿಸಿದರು. ರಸ್ತೆಗಾಗಿ ಮಾಡುವ ಪ್ರತಿಭಟನೆಯಲ್ಲಿ ಜಾತಿ ಧರ್ಮದ ಬಗ್ಗೆ ಮಾತನಾಡುತ್ತಾರೆ ಜಾತಿ ಧರ್ಮಕ್ಕೂ ರಸ್ತೆಗೂ ಏನೂ ಸಂಬAಧ ಎಂದು ಪ್ರಶ್ನಿಸಿದ ಪೊನ್ನಣ್ಣ, ಜಾತಿ ಜಾತಿಗಳ ಹಾಗೂ ಧರ್ಮ-ಧರ್ಮಗಳ ನಡುವೆ ಎತ್ತಿ ಕಟ್ಟುವುದೇ ಬಿಜೆಪಿಯ ಕೆಲಸ ಎಂದು ಟೀಕಿಸಿದರು.
ಲೋಕೋಪಯೋಗಿ ಇಲಾಖೆಯ ೧೩೧ ಕಿಲೋಮೀಟರ್ ರಸ್ತೆಗೆ ೧೫೫ ಕೋಟಿ, ಗ್ರಾಮೀಣ ಭಾಗದ ರಸ್ತೆ ಸುಮಾರು ೨೬ ಕೋಟಿ ಮೀಸಲಿದ್ದು ಸದ್ಯದಲ್ಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ೨೦೮ ಕೋಟಿ ವೆಚ್ಚದಲ್ಲಿ ವಿದ್ಯುತ್ ಶಕ್ತಿ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ. ವೀರಾಜಪೇಟೆ, ಪೊನ್ನಂಪೇಟೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ. ವಿ. ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ. ಗೋಣಿಕೊಪ್ಪ ಬಸ್ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ. ೧೪ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಹೀಗೆ ಕ್ರೀಡೆ ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರು ವಿನಾಕಾರಣ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ತನ್ನ ಅವಧಿಯಲ್ಲಿ ತಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಬಿಜೆಪಿ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ. ತಾನು ಸಿದ್ಧನಿದ್ದೇನೆ, ಅದನ್ನು ಬಿಟ್ಟು ಪ್ರತಿಭಟನೆ ಹಾಗೂ ಟೀಕೆಗಳಿಗೆ ತಾನು ಬಗ್ಗುವುದಿಲ್ಲ ಜಗ್ಗುವುದಿಲ್ಲ. ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟಿಸಿ ಕೊಡಗಿನ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಿದ ಎ.ಕೆ. ಸುಬ್ಬಯ್ಯ ನನ್ನ ತಂದೆಯವರು. ಇದುವರೆಗೂ ತಾನು ತನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ತಂದುಕೊAಡಿಲ್ಲ. ಕಾವೇರಿಯ ಮಣ್ಣಿನವನಾದ ತನಗೆ ಪ್ರಾಮಾಣಿಕತೆ ಬಿಟ್ಟು ಬೇರೆ ಗೊತ್ತಿಲ್ಲ. ತಾನು ಜನಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸದೆ ತನ್ನನ್ನು ಬಗ್ಗು ಬಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪೊನ್ನಣ್ಣ ಟೀಕಿಸಿದರು.
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ತನ್ನನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ಕಾಂಗ್ರೆಸ್ ವಕ್ತ್ತಾರ ತೆನ್ನೀರ ಮೈನಾ ಅವರುಗಳನ್ನು ವಿನಯ್ ಕೊಲೆಗಡುಕರು ಎಂದು ಬಿಜೆಪಿ ಅವರು ಬಿಂಬಿಸಿದರು. ವಿನಾಕಾರಣ ನಮ್ಮ ವಿರುದ್ಧ ಪ್ರತಿಭಟಿಸಿದರು; ವಿನiÀÄiï ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಹೇಳಿದರು ಕೂಡ ಸುಳ್ಳು ಆರೋಪ ಹೊರಿಸಿ ಪಕ್ಷದ ಕಾರ್ಯಕರ್ತರಿಗೆ, ನಮ್ಮ ಕುಟುಂಬದವರಿಗೆ, ಬಂಧುಗಳಿಗೆ ಮಾನಸಿಕ ವೇದನೆ ಉಂಟುಮಾಡಿದರು. ಆದರೆ ಇದೀಗ ವಿನಯ್ ಆತ್ಮಹತ್ಯೆ ಪ್ರಕರಣದಲ್ಲಿ ನಮ್ಮ ಮೇಲಿನ ಆರೋಪ ಸುಳ್ಳಾಗಿದೆ, ಪ್ರಕರಣದಲ್ಲಿ ನಮ್ಮ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈಗ ಯಾಕೆ ಬಿಜೆಪಿ ಅವರು ಏನು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಪೊನ್ನಣ್ಣ ತನ್ನ ವಿರುದ್ಧ ಆರೋಪ ಮಾಡಿದವರು ಕಾವೇರಮ್ಮೆ ಎದುರು ಕ್ಷಮೆ ಕೇಳಲಿ ಎಂದು ಹೇಳಿದರು.
ಸಮೀಕ್ಷೆಯಲ್ಲಿ ಧರ್ಮದ ಕಲಂ ನಲ್ಲಿ ಕೊಡವರು ಏನು ಬರೆಯಬೇಕು ಎಂಬುದನ್ನು ಜನಾಂಗದ ಹಿರಿಯರು ಹಾಗೂ ಸಂಬAಧಿಸಿದವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಅಧಿಕಾರವಿಲ್ಲ. ಈ ವಿಚಾರದಲ್ಲಿ ಬಿಜೆಪಿಯ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಪೊನ್ನಣ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೋಷ್ಠಿಯಲ್ಲಿ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ವಕ್ತಾರರಾದ ಟಾಟು ಮೊಣ್ಣಪ್ಪ, ತೆನ್ನಿರಾ ಮೈನಾ, ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಹಂಸ, ರಂಜಿ ಪೂಣಚ್ಚ, ಮತ್ತಿತರರು ಇದ್ದರು.