ಸುಂಟಿಕೊಪ್ಪ, ಅ. ೪: ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯ ಮುಂಭಾಗದಲ್ಲಿ ಸಭೆ ಸಮಾರಂಭಗಳು ನಡೆಯುವ ಸಂದರ್ಭ ಬಿಸಿಲು ಮಳೆ ಗಾಳಿಯಿಂದ ರಕ್ಷಿಸುವ ಸಲುವಾಗಿ ರೂ. ೫೦ ಲಕ್ಷ ವೆಚ್ಚದಲ್ಲಿ ಮೇಲ್ಛಾವಣಿ ನಿರ್ಮಾಣ ಮಾಡಲಾಗುವುದೆಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ.
ಬುಧವಾರ ರಾತ್ರಿ ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ ನಡೆದ ೫೫ನೇ ವರ್ಷದ ಆಯುಧಪೂಜಾ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸುಂಟಿಕೊಪ್ಪ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ಸುಸಜ್ಜಿತ ಬಸ್‌ನಿಲ್ದಾಣ ರೂ.ಏಳೂವರೆ ಕೋಟಿ ವೆಚ್ಚದಲ್ಲಿ ಅಮೃತ್ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.
ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ ಆಯುಧಪೂಜೆ ಮತ್ತು ವಿಜಯದಶಮಿ ಜಾತ್ಯತೀತ ಮತ್ತು ಧÀರ್ಮಾತೀತ ನೆಲೆಗಟ್ಟಿನಲ್ಲಿ ಆಚರಿಸ್ಪಡುತ್ತಿದ್ದು ಸುಂಟಿಕೊಪ್ಪದಲ್ಲಿ ಆಯುಧಪೂಜಾ ಸಮಾರಂಭ ಇಡೀ ರಾಜ್ಯದಲ್ಲಿ ಗಮನ ಸೆಳೆದ ಕಾರ್ಯಕ್ರಮವಾಗಿದೆ. ಇದನ್ನು ಮುಂದುವರಿಸಿಕೊAಡು ಹೋಗುವ ಜವಾಬ್ದಾರಿ ನಮ್ಮೆಲ್ಲ್ಲರದ್ದಾಗಿದೆ.
ವಾಹನ ಚಾಲಕರ ಸಂಘದ ಸ್ಥಾಪಕ ಅಧ್ಯಕ್ಷರು ಮತ್ತು ತಾಲೂಕು ಪಂಚಾಯಿತಿ ಮತ್ತು ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡಿರುವ ಜೆರ್ಮಿ ಡಿಸೋಜ ಅವರು ಸಂಘದ ಉಸ್ತುವಾರಿಯಲ್ಲಿ ಆ್ಯಂಬ್ಯುಲೆನ್ಸ್ ವಾಹನವನ್ನು ನೀಡಿದ್ದಾರೆ ಎಂದರು.
ಸಮಾರಂಭವನ್ನು ಉದ್ಘಾಟಿಸಿದ ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್ ಮಾತನಾಡಿ, ವಾಹನ ಚಾಲಕರ ಸಂಘದ ವೇದಿಕೆಯು ಸರ್ವಧರ್ಮ ಸಮ್ಮಿಲನಕ್ಕೆ ವೇದಿಕೆಯಾಗಿದ್ದು, ಸುಂಟಿಕೊಪ್ಪದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಈ ವೇದಿಕೆಯು ಚಾಲನೆ ನೀಡಿದ ಹಿರಿಮೆಯನ್ನು ಹೊಂದಿದೆ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್ ಪ್ರಾಸ್ತಾವಿಕವಾಗಿ ಸಂಘವು ನಡೆದ ಹಾದಿ, ಮುಂದಿನ ಸಂಘದ ಕಾರ್ಯಕ್ರಮಗಳಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಅತಿಥಿಗಳಲ್ಲಿ ಒಬ್ಬರಾಗಿದ್ದ ಖ್ಯಾತ ಚಲನಚಿತ್ರ ಹಾಸ್ಯನಟ ನಂಜಪ್ಪನ ಮಗ ಗುಂಜಪ್ಪನ ಖ್ಯಾತಿಯ ಟೆನ್ನಿಸ್‌ಕೃಷ್ಣ ಮಾತನಾಡಿ ತಾವು ಕೊಡಗಿನ ಅಳಿಯನಾಗಿದ್ದು ಕೊಡಗಿನಲ್ಲಿ ಚಲಚಿತ್ರ ತಂಡದ ಮಹಾನ್ ನಟರಾದ ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅಂಬರೀಷ್ ಮತ್ತಿತರರೊಂದಿಗೆ ಚಲನ ಚಿತ್ರೀಕರಣ ಸಂದರ್ಭದಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಡಾ.ಡಿ. ದೇವರಾಜ್ ಅವರನ್ನು ಅತಿಥಿ ಗಣ್ಯರು ಸನ್ಮಾನಿಸಿದರು. ವೇದಿಕೆಯಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಕೆ.ಪಿ. ಚಂದ್ರಕಲಾ, ಬಿ.ಬಿ. ಭಾರತೀಶ್, ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಸದಸ್ಯರುಗಳಾದ ರಫೀಕ್ ಖಾನ್, ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ಸೋಮನಾಥ್ ಶಾಂತಿ, ವಸಂತಿ, ಮಂಜುಳಾ (ರಾಸಥಿ), ಮಂಗಳಾ, ಗ್ರಾ.ಪಂ. ಮಾಜಿ ಅಧ್ಯಕ್ಷ ಕ್ಲಾಡಿಯಸ್‌ಲೋಬೋ, ಎವÀರ್‌ಗ್ರೀನ್ ಗ್ರೂಪ್ ಮಾಲೀಕ ಎ.ಬಿ. ಅಜೀಜ್, ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ.ಎಂ. ಶರೀಫ್, ಉದ್ಯಮಿ ವಿಲಿಯಂ, ರತ್ನಕುಮಾರ್, ಕಾರ್ಮಿಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಜಿ. ಕುಮಾರ್, ಯಂಕನ ಶ್ರೀರಾಮ್, ವರ್ಕ್ಶಾಪ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್, ತಲೆಹೊರೆ ಕಾರ್ಮಿಕ ಸಂಘದ ಅಧ್ಯಕ್ಷ ಆರ್.ಕೆ. ಹರೀಶ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಕಾರ್ಯದರ್ಶಿ ಮುನೀರ್ ಮತ್ತಿತರರು ಉಪಸ್ಥಿತರಿದ್ದರು.