ವೀರಾಜಪೇಟೆ, ಅ. ೫: ವೀರಾಜಪೇಟೆ ಪುರಸಭಾ ವ್ಯಾಪ್ತಿಯ ಮಲೆತಿರಿಕೆ ಬೆಟ್ಟ ಹಾಗೂ ಇತರ ಬೆಟ್ಟ ಪ್ರೆದೇಶಗಳಲ್ಲಿ ಪ್ರಕೃತಿ ವಿಕೋಪ ಸಂದರ್ಭ ಮನೆ ಕಳೆದುಕೊಂಡ ಹಾಗೂ ಈ ಭಾಗದಲ್ಲಿ ಇರುವ ನಿರಾಶ್ರಿತರಿಗೆ ನಿವೇಶನ ಒದಗಿಸುವ ಸಲುವಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಪುರಸಭಾ ವ್ಯಾಪ್ತಿಯಲ್ಲಿರುವ ವೀರಾಜಪೇಟೆ ಸುತ್ತಮುತ್ತ ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ವೀರಾಜಪೇಟೆ ಸಮೀಪದ ಅಂಬಟ್ಟಿಯಲ್ಲಿ ಈ ಹಿಂದೆ ಗುರುತಿಸಲಾಗಿದ್ದ ಸರಕಾರಿ ಜಾಗದಲ್ಲಿ ನಿರಾಶ್ರಿತರಿಗೆ ನಿವೇಶನ ಒದಗಿಸಲು ಈ ಹಿಂದೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪಿ.ಕೆ. ಪ್ರವೀಣ್, ಕಂದಾಯ ಇಲಾಖೆ ಅಧಿಕಾರಿ ಹರೀಶ್ ಎಂ.ಎಲ್. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಹಾ ತಬ್ಸುಂ, ಪುರಸಭೆ ಸದಸ್ಯರುಗಳಾದ ಎಸ್.ಹೆಚ್. ಮತೀನ್, ಮಹಮ್ಮದ್ ರಾಫಿ, ಆತೀಫ್ ಮನ್ನಾ, ಕುಂಡಚ್ಚೀರ ಮಂಜು, ಸಂತೋಷ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.