ಸಿದ್ದಾಪುರ, ಅ. ೫: ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನೆಲ್ಲಿಹುದಿಕೇರಿ ಗ್ರಾಮದ ಶ್ರೀ ಸತ್ಯನಾರಾಯಣ ದೇವಾಲಯಕ್ಕೆ ಭೇಟಿ ನೀಡಿದರು.ಶ್ರೀ ಸತ್ಯನಾರಾಯಣ ದೇವರ ಅಲಂಕಾರ ಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ಮಾತನಾಡಿದ ಅವರು, ದೇವಾಲಯದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಜಿ. ಚಂದ್ರಶೇಖರ್, ದೇವಾಲಯದ ಮುಖ್ಯಸ್ಥರಾದ ಟಿ. ಬಿ. ಗಣೇಶ್ ಪದಾಧಿಕಾರಿಗಳು ಸದಸ್ಯರು ಮತ್ತು ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಇದಕ್ಕೂ ಮೊದಲು ಪ್ರಥಮ ಬಾರಿಗೆ ಶ್ರೀ ಸತ್ಯನಾರಾಯಣ ದೇವಾಲಯಕ್ಕೆ ಭೇಟಿ ನೀಡಿದ ಸಂಸದರನ್ನು ದೇವಾಲಯದ ಆಡಳಿತ ಮಂಡಳಿಯವರು ಹಾಗೂ ಸ್ಥಳೀಯರು ಸೇರಿ ಆತ್ಮೀಯವಾಗಿ ಬರಮಾಡಿಕೊಂಡರು.
ಕಾಮಗಾರಿ ಪರಿಶೀಲನೆ
ದೇವಾಲಯ ಭೇಟಿಯ ಬಳಿಕ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ರಸ್ತೆಯ ಕಾವೇರಿ ನದಿಯ ಬಳಿ ನಿರ್ಮಿಸಲಾದ ಜಲಜೀವನ್ ಯೋಜನೆಯ ಕಾಮಗಾರಿಯನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪರಿಶೀಲನೆ ನಡೆಸಿದರು.