ಸೋಮವಾರಪೇಟೆ, ಅ. ೮: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆಲೂರು-ಸಿದ್ದಾಪುರ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿ, ನೇತ್ರಾವತಿ ಅವರ ಪುತ್ರ ಕೃಷ್ಣಮೂರ್ತಿ ಹಾಗೂ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕೊಡ್ಲಿಪೇಟೆಯ ಇಂದ್ರೇಶ್ ಹಾಗೂ ಪ್ರವೀಣ ದಂಪತಿ ಪುತ್ರ ಮನೋಜ್ ಅವರುಗಳನ್ನು ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಸೇರಿದಂತೆ ಇತರ ಗಣ್ಯರು ಸನ್ಮಾನಿಸಿದರು.
ಈ ಸಂದರ್ಭ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್, ಪ.ಪಂ. ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯೆ ಶೀಲಾ ಡಿಸೋಜ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ, ಚಿಕ್ಕ ಅಳುವಾರ ಬಯೋಕೆಮೆಸ್ಟಿç ವಿಭಾಗದ ಪ್ರಾಧ್ಯಾಪಕ ಡಾ. ಧರ್ಮಪ್ಪ ಕೆ.ಕೆ., ವಲಯ ಅರಣ್ಯಾಧಿಕಾರಿ ಶೈಲೇಂದ್ರ, ಮುಖಂಡರಾದ ಖ್ಯಾತೆ ಶಿವಕುಮಾರ್ ಸೇರಿದಂತೆ ಇತರರು ಇದ್ದರು.