ಸಿದ್ದಾಪುರ, ಅ. ೮: ರಾಷ್ಟಿçÃಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಶತಾಬ್ದಿ ಪ್ರಯುಕ್ತ ನೆಲ್ಲಿಹುದಿಕೇರಿ ಗ್ರಾಮದ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ಹುಣ್ಣಿಮೆ ದಿನದಂದು ವಿಶೇಷ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಮಾತನಾಡಿದ ಶ್ರೀ ಸತ್ಯನಾರಾಯಣ ದೇವಾಲಯ ಆqಳಿತ ಮಂಡಳಿ ಅಧ್ಯಕ್ಷ ಟಿ.ಜಿ. ಚಂದ್ರಶೇಖರ್. ಈ ಬಾರಿ ಹುಣ್ಣಿಮೆಯ ದಿನದಂದು ರಾಷ್ಟಿçÃಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ವಿಶೇಷ ಪೂಜೆಯನ್ನು ನಡೆಸಲಾಯಿತು. ದೇವಾಲಯದ ವತಿಯಿಂದ ಪ್ರತಿ ತಿಂಗಳ ಹುಣ್ಣಿಮೆಯ ದಿನದಂದು ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನಡೆಸಲಾಗುವುದೆಂದು ತಿಳಿಸಿದರು. ಸಾಮೂಹಿಕ ಸತ್ಯನಾರಾಯಣ ಪೂಜೆಯ ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ನೀಡಲಾಯಿತು ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ಸತ್ಯನಾರಾಯಣ ದೇವಾಲಯದ ಮುಖ್ಯಸ್ಥ. ಟಿ.ಬಿ. ಗಣೇಶ ಹಾಗೂ ರಾಷ್ಟಿçÃಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ. ಉದಯ್ ಕುಮಾರ್.ಕೆ.ಪಿ. ಸುಕುಮಾರನ್. ಶ್ರೀನಿವಾಸ ಹಾಗೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ದೇವಾಲಯದ ತಕ್ಕಮುಖ್ಯಸ್ಥ ಟಿ.ಪಿ. ನಂಜಪ್ಪ ಹಾಜರಿದ್ದರು.