ಕೂಡಿಗೆ, ಅ. ೮: ಜಿಲ್ಲೆಯ ಪ್ರಮುಖ ಹಾರಂಗಿ ಅಣೆಕಟ್ಟೆಯ ಉಪ ಅಣೆಕಟ್ಟೆಯಾದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರದ ಸಮೀಪದಲ್ಲಿರುವ ಚಿಕ್ಲಿಹೊಳೆ ಅಣೆಕಟ್ಟೆಯ ರಸ್ತೆಯ ಅಭಿವೃದ್ಧಿಗೆ ರಾಜ್ಯ ಕಾವೇರಿ ನೀರಾವರಿ ನಿಗಮ ಮೂಲಕ ರೂ. ೫ ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ನೀರಾವರಿ ಇಲಾಖೆಯ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಸತೀಶ್ ತಿಳಿಸಿದ್ದಾರೆ.