ಮಡಿಕೇರಿ, ಅ. ೮: ಗೋಣಿಕೊಪ್ಪ ಸಮೀಪದ ಕೈಕೇರಿ ಗ್ರಾಮದಲ್ಲಿ ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಗೆ ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಭೇಟಿ ನೀಡಿ ಸಭೆಯಲ್ಲಿ ಪಾಲ್ಗೊಂಡರು. ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಯದುವೀರ್ ಒಡೆಯರ್ ಅವರನ್ನು ಸನ್ಮಾನಿಸಲಾಯಿತು. ನಿರ್ಮಾಣ ಹಂತದಲ್ಲಿರುವ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ ಅಹವಾಲುಗಳನ್ನು ಸ್ವೀಕರಿಸಿ, ಕಟ್ಟಡ ಕಾಮಗಾರಿಗೆ ಧನಸಹಾಯ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.