ವೀರಾಜಪೇಟೆ, ಅ. ೮: ಜೀವನದಲ್ಲಿ ಯಾವುದೇ ನಕಾರಾತ್ಮಕ ಹಿನ್ನಲೆಯಿದ್ದರೂ ಕೂಡ ಸಕಾರಾತ್ಮಕದೆಡೆಗೆ ತೆರಳಿ ಮಾನಸಿಕವಾಗಿ ಪರಿವರ್ತನೆ ಹೊಂದಿ ಬದುಕನ್ನು ವಿಕಾಸಗೊಳಿಸಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ನೈಜ ಉದಾಹರಣೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟರು.

ವೀರಾಜಪೇಟೆ ತಾಲೂಕು ಅಡಳಿತ, ತಾಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ, ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳು, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ಪುರಸಭೆ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ವರ್ಷಗಳಲ್ಲಿ ವೀರಾಜಪೇಟೆಯ ಆರ್ಜಿ ಗ್ರಾಮದ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡುವಂತೆ ಹೇಳಿದರು. ವಾಲ್ಮೀಕಿ ರಾಮಾಯಣದ ಬಗ್ಗೆ ಹಾಗೂ ವಾಲ್ಮೀಕಿ ಮಹರ್ಷಿಗಳ ಬಗ್ಗೆ ದೇವಣಗೇರಿ ಬಿ.ಸಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಹೆಚ್.ಡಿ. ಮುಖ್ಯ ಭಾಷಣದಲ್ಲಿ ಮಾಹಿತಿ ನೀಡಿದರು. ವೀರಾಜಪೇಟೆ ಗಡಿಯಾರ ಕಂಬದಿAದ ಪುರಸಭೆ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು. ಈ ಸಂದರ್ಭವೀರಾಜಪೇಟೆ ಪುರಸಭೆ ಉಪಾಧ್ಯಕ್ಷೆ ಫಸಿಯ ತಬುಸುಂ, ಸದಸ್ಯರಾದ ಸುಭಾಷ್ ಮಹದೇವ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್, ವೀರಾಜಪೇಟೆ À ತಹಶೀಲ್ದಾರ್ ಪ್ರವೀಣ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಅಪ್ಪಣ್ಣ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ತೇಜರಾಜು, ಪ್ರಬಾರ ವಿಸ್ತಾರಣಾಧಿಕಾರಿ ಪ್ರಶಾಂತ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.