vಭಾಗಮಂಡಲ, ಅ. ೮: ಶ್ರೀ ಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ -೨೦೨೫ ಜಾತ್ರೆಯ ಅಂಗವಾಗಿ ಕ್ಷೇತ್ರಗಳಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಕಾವೇರಿ ತೀರ್ಥೋತ್ಸವಕ್ಕೆ ಇನ್ನು ೯ ದಿನಗಳು ಮಾತ್ರ ಬಾಕಿ ಉಳಿದಿದ್ದು, ಕ್ಷೇತ್ರದಲ್ಲಿ ಪೂರ್ವ ತಯಾರಿ ನಡೆಯುತ್ತಿದೆ. ಭಾಗಮಂಡಲದಲ್ಲಿ ತುಲಾ ಸಂಕ್ರಮಣ ಪ್ರಯುಕ್ತ ಹಬ್ಬದ ಕಟ್ಟುಪಾಡುಗಳ ಆಚರಣೆ ನಡೆಯುತ್ತಿದೆ. ಅಕ್ಟೋಬರ್ ೪ ರಂದು ಬೆಳಿಗ್ಗೆ ೮.೩೩ ಕ್ಕೆ ತುಲಾ ಲಗ್ನದಲ್ಲಿ ಆಜ್ಞಾ ಮಹೂರ್ತವನ್ನು ನೆರವೇರಿಸಲಾಗಿದೆ. ಆ ಮೂಲಕ ಭಾಗಮಂಡಲ ವ್ಯಾಪ್ತಿಯಲ್ಲಿ ವಿವಿಧ ಕಟ್ಟುಪಾಡುಗಳನ್ನು ವಿಧಿಸಲಾಗಿದ್ದು ಮಾಂಸಾಹಾರ ಸೇವನೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಈ ದಿನದಿಂದ ಜಾತ್ರೆ ಮುಗಿಯುವವರೆಗೆ ನಾಡಿನಲ್ಲಿ ಮಧು ಮಾಂಸ ಸೇವನೆ ಮರಕಡಿಯುವುದು, ಬಲಿ, ಹಿಂಸಾಕೃತ್ಯಗಳನ್ನು ನಡೆಸುವುದು ಮುಂತಾದ ಕಾರ್ಯಗಳಿಗೆ ನಿರ್ಬಂಧ ಹೇರಲಾಗಿದೆ.

ಈ ನಡುವೆ ಅಸ್ಸಾಂ ಮೂಲದ ಕಾರ್ಮಿಕರು ಬುಧವಾರ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಮೀನುಗಳನ್ನು ಹಿಡಿದು ಕಟ್ಟುಪಾಡುಗಳನ್ನು ಉಲ್ಲಂಘಿಸಿರುವ ಬಗ್ಗೆ ೪ಐದ£ (ಮೊದಲ ಪುಟದಿಂದ) ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಹಾಗೂ ಸುತ್ತಮುತ್ತ ಮೀನುಹಿಡಿದು ಪವಿತ್ರ ಕ್ಷೇತ್ರವನ್ನು ಅಶುದ್ಧ ಮಾಡಿರುವ ಬಗ್ಗೆ ಸ್ಥಳೀಯರು ಪಂಚಾಯಿತಿ ಗ್ರಾಮ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ತಂದು ನಂತರ ಮೀನು ಹಿಡಿದವರನ್ನು ಪೊಲೀಸ್ ಅಧಿಕಾರಿಗಳಿಗೆ ಒಪ್ಪಿಸಿದರು.