ಸೋಮವಾರಪೇಟೆ, ಅ. ೯: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ. ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಆರೋಗ್ಯ ಸುರಕ್ಷಾಧಿಕಾರಿ ದಿವ್ಯ ಮಾತನಾಡಿ, ಮಹಿಳೆಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಸದುದ್ದೇಶದಿಂದ ಪೋಷಣ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕಾಂಶವಿರುವ ಆಹಾರಗಳನ್ನು ಉಪಯೋಗಿಸಬೇಕು. ಈ ಬಗ್ಗೆ ಅಂಗನವಾಡಿ ಕೇಂದ್ರಗಳಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗುತ್ತದೆ. ಗರ್ಭಿಣಿಯರು ಅತೀ ಹೆಚ್ಚಿನ ಎಚ್ಚರಿಕೆ ವಹಿಸಿ, ಉತ್ತಮ ಆಹಾರವನ್ನು ಉಪಯೋಗಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯೆ ಹೆಚ್.ಪಿ. ಪ್ರಮೀಳ, ಅಂಗನವಾಡಿ ಕಾರ್ಯಕರ್ತೆ ಸವಿತಾ, ಆಶಾ ಕಾರ್ಯಕರ್ತರಾದ ಈಶ್ವರಿ, ಶೈಲಾ, ಕುಸುಮಾ, ಕರವಸೂಲಿಗಾರ ವಿಶ್ವರೂಪಾಚಾರ್ ಇದ್ದರು.