ಮಡಿಕೇರಿ, ಅ. ೯: ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಹೆರವನಾಡು ಗ್ರಾಮದ ಹರ್‌ಮಂದಿರ್ ಶಾಲೆಯ ವಸತಿ ನಿಲಯದಲ್ಲಿ ಸಂಭವಿಸಿದ ಅಗ್ನಿಅವಘಡದಿಂದ ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ರೂ. ೫ ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಘೋಷಿಸಿದರು.

ಅಗ್ನಿ ಅವಘಡ ಸಂದರ್ಭ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಇಬ್ಬರು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಸುಮಿತ್ರ ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ವಸ್ಥಗೊಂಡಿರುವ ಮಕ್ಕಳು ಇದೀಗ ಆರೋಗ್ಯವಾಗಿದ್ದಾರೆ. ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಬಾಲಕ ಮೃತಪಟ್ಟಿರುವುದು ಬಹಳ ನೋವು ಉಂಟು ಮಾಡಿದೆ. (ಮೊದಲ ಪುಟದಿಂದ) ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ರೂ. ೫ ಲಕ್ಷ ಪರಿಹಾರ ಘೋಷಿಸಿದ್ದಾರೆ. ಮತ್ತಷ್ಟು ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇನೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆಗೆ ಸೂಚನೆ ನೀಡಿದ್ದೇನೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಎಂದು ಹೇಳಲಾಗುತ್ತಿದೆ. ಇದಕ್ಕೆ ತನಿಖೆಯ ಅಗತ್ಯತೆ ಇದೆ. ನಿರ್ಲಕ್ಷö್ಯ, ಲೋಪಗಳು ಕಂಡುಬAದಲ್ಲಿ ಕ್ರಮಕೈಗೊಳ್ಳಲಾಗುವುದು. ಶಾಲೆಯ ಕುರಿತು ಸಾರ್ವಜನಿಕ ವಲಯದಲ್ಲಿ ಉತ್ತಮ ಅಭಿಪ್ರಾಯವಿದೆ. ೪ ಮಕ್ಕಳ ಸಮಯಪ್ರಜ್ಞೆಯಿಂದ ಎಲ್ಲರೂ ಬದುಕುಳಿದಿದ್ದಾರೆ ಎಂದು ಪ್ರಶಂಶಿಸಿದರು. ಈ ಸಂದರ್ಭ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ವಕ್ತಾರ ತೆನ್ನೀರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ನಗರ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.