ಗೋಣಿಕೊಪ್ಪಲು. ಅ.೧೦: ಮೈಸೂರುನಿಂದ ವಿರಾಜಪೇಟೆ ಕಡೆಗೆ ಆಗಮಿಸುತ್ತಿದ್ದ ಇನೋವಾ ಕಾರೋಂದು ದೇವರಪುರ - ಚನ್ನಂಗೊಲ್ಲಿ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮ್ರತಪಟ್ಟಿದ್ದಾರೆ. ಇನೋವಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಇದರಿಂದಾಗಿ ಕಾರಿನಲ್ಲಿನಲ್ಲಿದ್ದ ಇರ್ವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಂಭೀರ ಸ್ವರೂಪದ ಗಾಯಗೊಂಡವರನ್ನು ಮೈಸೂರು ೪ನಾಲ್ಕನೇ ಪುಟಕ್ಕೆ

ಮೊದಲ ಪುಟದಿಂದ) ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರು ಮಂದಿ ಪ್ರಾಣಪಾಯದಿಂದ ಪಾರಾಗಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.