ಸಿದ್ದಾಪುರ, ಅ. ೯: ಕುಶಾಲನಗರ ಉಪವಲಯ ಅರಣ್ಯ ಅಧಿಕಾರಿ ಸಚಿನ್ ನಿಂಬಾಳ್ಕರ್ ಅವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದರು. ಸಚಿನ್ ನಿಂಬಾಳ್ಕರ್ ಅವರು ಅರಣ್ಯ ಕಾನೂನು ಮತ್ತು ನ್ಯಾಯಾಲಯದ ದಾಖಲೆಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಿ ೧೩೮ ಅರಣ್ಯ ಮೊಕದ್ದಮೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿದ್ದಾರೆ. ಹಾಗೂ ೨೦ ವನ್ಯಜೀವಿ ಪ್ರಕರಣಗಳಲ್ಲಿ ತ್ವರಿತ ಗತಿಯಲ್ಲಿ ವರದಿ ಸಲ್ಲಿಸಿದ್ದಾರೆ. ಹಾಗೂ ಹೈಕೋರ್ಟ್ ಸೇರಿದಂತೆ ಇನ್ನಿತರ ನ್ಯಾಯಾಲಯಗಳಲ್ಲಿ ಅರಣ್ಯ ಇಲಾಖೆ ಸಂಬAಧಿಸಿದ ಪ್ರಕರಣಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ೨೦೧೯ರಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ರಸ್ತೆಗಳಿಗೆ ಬಿದ್ದ ಮರಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಿದ್ದರು. ಈ ಹಿನ್ನಲೆಯಲ್ಲಿ ಇವರ ಕಾರ್ಯವನ್ನು ಹಾಗೂ ಇವರ ಸಾಧನೆ ಮತ್ತು ಕರ್ತವ್ಯ ನಿಷ್ಠೆಯನ್ನು ಪ್ರಶಂಸಿಸಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳ ಪದಕ ಪ್ರದಾನಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಬಿ. ಖಂಡೆ,್ರ ವೀರಾಜಪೇಟೆ ತಾಲೂಕು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸೇರಿದಂತೆ ಸಚಿವರು ಹಾಗೂ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಮುಖ್ಯಮಂತ್ರಿಗಳ ಪದಕ ಪಡೆದಿರುವ ಸಚಿನ್ ನಿಂಬಾಳ್ಕರ್ ಅವÀÀರು ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.