*ಗೋಣಿಕೊಪ್ಪ, ಅ. ೧೦ : ಶಿಕ್ಷಣ ಸಚಿವ ಮಧುಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಾನಂಡ ಪೃಥ್ಯು ಭಾಗವಹಿಸಿ ಸಭೆಯಲ್ಲಿ ಚರ್ಚೆ ನಡೆಸಿದರು.

ಮಂಗಳೂರಿನಲ್ಲಿ ನಡೆದÀ ಸಭೆಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಿಂದ ಹಿಂದುಳಿದ ವರ್ಗಗಳಿಗೆ ನ್ಯಾಯಬದ್ಧ ಹಕ್ಕು ಒದಗಿಸಿಕೊಡಲು ಸಾಧ್ಯವೆಂದು ಸಭೆಯಲ್ಲಿ ಚರ್ಚಿಸಲಾಯಿತು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾನೂರು ವಲಯ ಅಧ್ಯಕ್ಷ ರಮೇಶ್, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಸಿದ್ದು ನಾಚಪ್ಪ ಉಪಸ್ಥಿತರಿದ್ದರು.