ಮಡಿಕೇರಿ, ಅ. ೯: ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸಲಾಗಿದೆ.

ಸಾರ್ವಜನಿಕರು hಣಣಠಿs://ಞsಛಿbಛಿseಟಜಿಜeಛಿಟಚಿಡಿಚಿಣioಟಿ.ಞಚಿಡಿಟಿಚಿಣಚಿಞಚಿ.gov.iಟಿ/ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲಿಂಕ್‌ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ `ನಾಗರಿಕ’ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್‌ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಿದೆ.

ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಿದೆ.

ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್‌ನಲ್ಲಿರುವ UಊIಆ ಸಂಖ್ಯೆಯನ್ನು ದಾಖಲಿಸಿ ಸ್ಕ್ರೀನ್‌ನಲ್ಲಿ ಕೋರುವ ಮಾಹಿತಿ ದಾಖಲು ಮಾಡಬೇಕಿದೆ.

ಈ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ ಈ ಬಗ್ಗೆ ಮೊಬೈಲ್‌ಗೆ ಸಂದೇಶ ಬರಲಿದೆ.

ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬAಧಿಸಿದAತೆ ೧೧೩೧ ಬ್ಲಾಕ್‌ಗಳಿದ್ದು, ಇದರಲ್ಲಿ ೧,೩೪,೩೯೬ ಕುಟುಂಬಗಳ ಗುರಿಯಲ್ಲಿ ಈಗಾಗಲೇ ೧,೦೪,೬೪೪ ಕುಟುಂಬಗಳ ಸಮೀಕ್ಷೆ ಆಗಿದ್ದು, ಶೇ.೭೭.೮೬ ರಷ್ಟು ಸಮೀಕ್ಷೆ ನಡೆದಿದೆ.

ತಾಲೂಕುವಾರು ಗಮನಿಸಿದಾಗ ಕುಶಾಲನಗರ ತಾಲೂಕಿನಲ್ಲಿ ೩೦೪ ಬ್ಲಾಕ್‌ಗಳಲ್ಲಿ ೩೪,೬೩೭ ಕುಟುಂಬಗಳಲ್ಲಿ ೨೬,೮೧೯ ಕುಟುಂಬಗಳ ಸಮೀಕ್ಷೆ ಆಗಿದೆ. ಮಡಿಕೇರಿ ತಾಲೂಕಿನಲ್ಲಿ ೨೬೪ ಬ್ಲಾಕ್‌ಗಳಲ್ಲಿ ೩೫,೧೨೭ ಕುಟುಂಬಗಳಲ್ಲಿ ೨೫,೬೧೦ ಕುಟುಂಬಗಳ ಸಮೀಕ್ಷೆ ಆಗಿದೆ. ಪೊನ್ನಂಪೇಟೆ ತಾಲೂಕಿನಲ್ಲಿ ೮೭ ಬ್ಲಾಕ್‌ಗಳಲ್ಲಿ ೧೦,೩೩೭ ಕುಟುಂಬಗಳಲ್ಲಿ ೮,೭೪೩ ಕುಟುಂಬಗಳ ಸಮೀಕ್ಷೆ ಆಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೨೬೬ ಬ್ಲಾಕ್‌ಗಳಲ್ಲಿ ೨೯,೪೦೨ ಕುಟುಂಬಗಳ ಗುರಿಯಲ್ಲಿ ೨೪,೪೨೮ ಕುಟುಂಬಗಳ ಸಮೀಕ್ಷೆ ಆಗಿದೆ.

ಹಾಗೆಯೇ ವೀರಾಜಪೇಟೆ ತಾಲೂಕಿನಲ್ಲಿ ೨೧೦ ಬ್ಲಾಕ್‌ಗಳಲ್ಲಿ ೨೪,೮೯೩ ಕುಟುಂಬಗಳ ಗುರಿಯಲ್ಲಿ ೧೯,೦೪೪ ಕುಟುಂಬಗಳ ಸರ್ವೇ ಆಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್. ದೀಪಕ್ ತಿಳಿಸಿದ್ದಾರೆ.