ಸೋಮವಾರಪೇಟೆ,ಅ.೯: ರಾಜ್ಯದ ವಿವಿಧ ಭಾಗಗಳು ಸೇರಿದಂತೆ ದೇಶದ ಕೆಲವೊಂದು ರಾಜ್ಯಗಳಲ್ಲಿ ಐ ಲವ್ ಮಹಮ್ಮದ್ ಹೆಸರಿನಲ್ಲಿ ನಡೆಯುತ್ತಿರುವ ಅಭಿಯಾನದಡಿ ಅಮಾಯಕ ಹಿಂದೂಗಳ ಮೇಲೆ ಧಾಳಿಗಳು ಜರುಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಿ, ಮತಾಂಧರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಮೂಲಕ ಕೇಂದ್ರ ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಿಂದೂ ಜನ ಜಾಗೃತಿ ಸಮಿತಿಯ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ತಾಲೂಕು ಕಚೇರಿಗೆ ಅಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದರು. ಅಭಿಯಾನದ ಹಿಂದಿರುವ ಶಕ್ತಿಗಳನ್ನು ಪತ್ತೆಹಚ್ಚಬೇಕು. ಗಲಭೆಗೆ ಕುಮ್ಮಕ್ಕು ನೀಡುತ್ತಿರುವವರು ಮತ್ತು ಧಾಳಿಕೋರರಿಂದ ನಾಶಗೊಂಡ ಖಾಸಗಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ನಷ್ಟವನ್ನು ಅವರಿಂದಲೇ ವಸೂಲಿ ಮಾಡಬೇಕು. ಇಂತಹ ಘಟನೆಗಳ ಬಗ್ಗೆ ರಾಷ್ಟಿçÃಯ ಭದ್ರತಾ ಕಾಯ್ದೆ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದರು.ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳಾದ ಪಿ.ಎನ್. ಪ್ರಸಾದ್, ಬಸವಕುಮಾರ್, ಸಾವಿತ್ರಿ, ರಾಧಾಕೃಷ್ಣ, ಪ್ರಸನ್ನಕುಮಾರ್, ಜಗದೀಶ್, ಶಂಕರ್, ಅಣ್ಣಯ್ಯ ಸೇರಿದಂತೆ ಇತರರು ಇದ್ದರು.