ಮಡಿಕೇರಿ, ಅ. ೯: ಮೂರ್ನಾಡು ಕೊಡವ ಸಮಾಜದ ವತಿಯಿಂದ ತಾ. ೧೨ ರಂದು ಕೈಲ್‌ಮುಹೂರ್ತ ಸಂತೋಷಕೂಟ ಏರ್ಪಡಿಸ ಲಾಗಿದೆ. ಸಮಾಜದ ಅಧ್ಯಕ್ಷ ಪುದಿಯೊಕ್ಕಡ ಕಾಶಿ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳೆಗಾರ, ಟಿಎಪಿಸಿಎಂಎಸ್ ಅಧ್ಯಕ್ಷ ಪೆಬ್ಬಾಟಂಡ ಎ. ಪೆಮ್ಮಯ್ಯ, ಕೊಡವಾಮೆರ ಕೊಂಡಾಟ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಉಪಸ್ಥಿತರಿರುವರು.
ಸಂತೋಷ ಕೂಟದ ಅಂಗವಾಗಿ ಮಕ್ಕಳಿಂದ ಹಿಡಿದು ಹಿರಿಯರವರೆಗೆ ವಿವಿಧ ಆಟೋಟ ಸ್ಪರ್ಧೆ ಇದ್ದು, ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿತಸಲಾಗುವುದೆಂದು ಸಮಾಜದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.