ಶ್ರೀಮಂಗಲ, ಅ. ೧೦: ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮೃತ್ಯುಂಜಯ ದೇವಸ್ಥಾನಕ್ಕೆ ವೀರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಹಾಗೂ ಪತ್ನಿ ಕಾಂಚನ್ ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉದ್ದೇಶಿತ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯವರ ಜೊತೆ ಸಮಾಲೋಚನೆ ನಡೆಸಿದರು. ದೇವಸ್ಥಾನ ಜೀರ್ಣೋದ್ದಾರಕ್ಕೆ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು. ದೇವಸ್ಥಾನ ಆಡಳಿತ ಮಂಡಳಿಯಿAದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ದೇವತಕ್ಕ ಅಣ್ಣೀರ ಕುಟುಂಬದ ದಾದಾ ಗಣಪತಿ, ನಾಡ್ ತಕ್ಕ ಕಾಯಪಂಡ ಕುಟುಂಬದ ಅಯ್ಯಪ್ಪ, ಆಡಳಿತ ಮಂಡಳಿಯ ಅಧ್ಯಕ್ಷ ಚೋನಿರ ಸುಬ್ರಮಣಿ, ಉಪಾಧ್ಯಕ್ಷ ಕಾಯಪಂಡ ಸ್ಟಾಲಿನ್ ಗಣಪತಿ, ಖಜಾಂಚಿ ಬಲ್ಯಮೀದೇರಿರ ಚೇತನ್ ಸೋಮಣ್ಣ, ಸದಸ್ಯರಾದ ಅಣ್ಣೀರ ಲೋಕೇಶ್, ಕಾಯಪಂಡ ಸುನಿಲ್, ಬಲ್ಯಮೀದೇರಿರ ರನ್ನು, ಅಣ್ಣೀರ ಸರು ಮಂಜುನಾಥ್, ಮೀದೇರಿರ ಗಣಪತಿ, ಮುಖ್ಯ ಅರ್ಚಕ ಗಿರೀಶ್, ಗ್ರಾಮಸ್ಥರು, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್ ಇದ್ದರು.