ಮಡಿಕೇರಿ, ಅ. ೯: ವಕೀಲ ಯಕ್ಷಿತ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಡಿವೈಎಸ್‌ಪಿ ಸೂರಜ್, ಠಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳ ಮೇಲೆ ಮಾನವ ಹಕ್ಕುಗಳ ಆಯೋಗ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ.
ದಸರಾ ದಿನದ ಕೊನೆಯ ದಿನದಂದು ಗಾಂಧಿ ಮೈದಾನದಲ್ಲಿ ವಕೀಲ ಯಕ್ಷಿತ್ ಅವರ ಮೇಲೆ ಪೊಲೀಸರು ಹಲ್ಲೆಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ದೂರನ್ನು ನೀಡಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮಾನವ ಹಕ್ಕುಗಳ ಆಯೋಗ, ಬೆಂಗಳೂರು ಹಾಗು ಪೊಲೀಸ್ ಮಹಾ ನಿರ್ದೇಶಕರಲ್ಲಿ ಡಿವೈಎಸ್‌ಪಿ ಸೂರಜ್, ಠಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳ ಮೇಲೆ ದೂರು ದಾಖಲಿಸಲಾಗಿದೆ.
ಈ ಘಟನೆಯ ಬಗ್ಗೆ ಬೆಂಗಳೂರು ವಕೀಲರ ಸಂಘ ಸಹ ಸಂಬAಧ ಪಟ್ಟ ಇಲಾಖೆ ಮತ್ತು ನ್ಯಾಯಾಲಯಗಳಲ್ಲಿ ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.