ಮಡಿಕೇರಿ, ಅ. ೯: ಸುಪ್ರೀಂಕೋರ್ಟ್ ಆವರಣದಲ್ಲೇ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ಪ್ರಕರಣವನ್ನು ಕೊಡಗು ಜಿಲ್ಲಾ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಖಂಡಿಸಿದೆ. ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ಧನ್ ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್. ವೀರೇಂದ್ರ ಅವರು ಪ್ರಜ್ಞಾಹೀನ ಮನೋಸ್ಥಿತಿಯ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಿದ್ದಾರೆ.
ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲಿನ ದಾಳಿ ಖಂಡನೀಯವೆAದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಡಿಪಾರಿಗೆ ಒತ್ತಾಯ
ಶನಿವಾರಸಂತೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಕರಣವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಡಿ.ಆರ್. ವೇದಕುಮಾರ್ ಖಂಡಿಸಿದ್ದಾರೆ.
ಇದೊAದು ದಲಿತ ವಿರೋಧಿ ಹಾಗೂ ಸಂವಿಧಾನ ವಿರೋಧಿ ಕೃತ್ಯವಾಗಿದ್ದು ವಕೀಲ ರಾಕೇಶ್ ಕಿಶೋರ್ ಮೇಲೆ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.