ಕುಶಾಲನಗರ, ಅ. ೯: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ಆಶ್ರಯದಲ್ಲಿ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮ ಜರುಗಿತು.

ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಅಭಿಷೇಕ ನಡೆಯಿತು. ಉದ್ಯಮಿ ಸಂದೀಪ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದರು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್ ಮತ್ತಿತರರಿದ್ದರು.