ಸೋಮವಾರಪೇಟೆ, ಅ. ೧೦: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪತ್ರಕರ್ತರಿಗೆ ಕ್ರೀಡಾ ಸ್ಪರ್ಧೆ ತಾ. ೨೬ರಂದು ಪೂರ್ವಾಹ್ನ ೧೦ ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಸದಸ್ಯರಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕೇರಂ ಸಿಂಗಲ್ಸ್ ಮತ್ತು ಡಬಲ್ಸ್, ಚೆಸ್ ಸ್ಪರ್ಧೆ ನಡೆಯಲಿದೆ. ಸಂಜೆ ಕುಟುಂಬಸ್ಥರಿಗೆ ವಿವಿಧ ಕ್ರೀಡಾ ಸ್ಪರ್ಧೆ ನಡೆಯಲಿದೆ. ನಂತರ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ವಾರ್ಷಿಕೋತ್ಸವ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಪಿ. ಲೋಕೇಶ್ ತಿಳಿಸಿದ್ದಾರೆ.