ಶನಿವಾರಸಂತೆ, ಅ. ೧೦: ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದÀ ಪ್ರಕರಣವನ್ನು ಖಂಡಿಸಿ ತಾ. ೧೩ ರಂದು ಬೆಳಿಗ್ಗೆ ೧೦.೩೦ಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಶನಿವಾರಸಂತೆಯ ಪ್ರವಾಸಿ ಮಂದಿರದ ಮುಂಭಾಗದಿAದ ಕಂದಾಯ ಇಲಾಖೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಕಂದಾಯ ಇಲಾಖೆ ಮುಂಭಾಗ ಧರಣಿ ನಡೆಸಲಾಗುವುದು ಎಂದು ದ.ಸಂ.ಸ. ಜಿಲ್ಲಾ ಸಂಚಾಲಕ ಎಂ.ಎನ್.ರಾಜಪ್ಪ ಮೆಣಸ ಹಾಗೂ ಕಾರ್ಯದರ್ಶಿ ಎಂ.ಈ. ಪೊನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.