ಸೋಮವಾರಪೇಟೆ, ಅ. ೧೧: ವಿಶ್ವ ಹೃದಯ ದಿನದ ಪ್ರಯುಕ್ತ ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸಮುದಾಯ ಆರೋಗ್ಯದ ಕಡೆಗೆ ತನ್ನ ಸೇವಾ ಉಪಕ್ರಮದ ಅಂಗವಾಗಿ ಸ್ಥಳೀಯ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಶಾಲಾ ಶಿಕ್ಷಕರಿಗೆ ಉಚಿತ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಹಿಮಾನಿ ಮಾತನಾಡಿ, ಎಲ್ಲರೂ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಒತ್ತಡ ನಿರ್ವಹಣೆ ಮತ್ತು ನಿರಂತರ ತಪಾಸಣೆಗಳ ಮೂಲಕ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಮಾತನಾಡಿ, ಆರೋಗ್ಯಕರ ಹೃದಯ ಆರೋಗ್ಯಕರ ಜೀವನವನ್ನು ಖಚಿತಪಡಿಸುತ್ತದೆ ಎಂಬ ಸಂದೇಶದೊAದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಶಿಬಿರದಲ್ಲಿ ರಕ್ತದೊತ್ತಡ, ಇಸಿಜಿ ಮತ್ತು ಇತರ ಹೃದಯ ಸಂಬAಧಿತ ತಪಾಸಣೆ ನಡೆಸಲಾಯಿತು. ಅನೇಕ ಶಿಕ್ಷಕರು ಶಿಬಿರದ ಪ್ರಯೋಜನ ಪಡೆದರು.
ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳಾದ ಸಂಗೀತ ದಿನೇಶ್, ಸುವಿನಾ ಕೃಪಾಲ್, ಲತಾ ನಾಗೇಶ್ ಸೇರಿದಂತೆ ಇತರರು ಇದ್ದರು.