ಕೂಡಿಗೆ, ಅ. ೧೧: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕ ಮತ್ತು ಕುಶಾಲನಗರ ಆದಿಶಕ್ತಿ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಇವರ ಸಂಯುಕ್ತ ಆಶ್ರಯದಲ್ಲಿ ತೊರೆನೂರು ವಿರಕ್ತ ಮಠದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮಕ್ಕೆ ಮಹಾಸಭಾದ ಅಧ್ಯಕ್ಷ ಶಿವಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ಪತ್ರೆಗಳ ಸಹಯೋಗದಲ್ಲಿ ಆರೋಗ್ಯ ಶಿಬಿರ ಏರ್ಪಡಿಸುವ ಮೂಲಕ ಆರೋಗ್ಯಕ್ಕೆ ಹೆಚ

Ä್ಚ ಒತ್ತು ನೀಡಬೇಕು ಎಂದರು.

ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಮಲ್ಲೇಶ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಯ್ಯ, ಶಿವಾನಂದ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಟಿ.ಕೆ. ಪಾಂಡುರAಗ, ಪ್ರಾಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಕ್ಕರೆ ಕಾಯಿಲೆ ಪರೀಕ್ಷೆ, ರಕ್ತದ ಒತ್ತಡ ಪರೀಕ್ಷೆಗಳು ನಡೆದವು.