ವೀರಾಜಪೇಟೆ, ಅ. ೧೧: ವೀರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಮಾಜದ ಏಳಿಗೆಗೆ ಮಹಿಳಾ ಸಹಕಾರ ಸಂಘದ ಎಲ್ಲಾ ಸದಸ್ಯರ ಸಹಕಾರ ಮುಖ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಸದಸ್ಯತ್ವ ನೋಂದಣಿ ಹಣ ಹೆಚ್ಚಿಸುವಂತೆ ಹಾಗೂ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಮಾಡಿ ಅನುಮೋದಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷೆ ಬಿ.ಆರ್. ಸಬಿತ, ನಿರ್ದೆಶಕರಾದ ಆಶಾ ಚಿಣ್ಣಪ್ಪ, ಯು.ಕೆ. ಪೊನ್ನಮ್ಮ, ಕುಸುಮ ಸೋಮಣ್ಣ, ಜಯಲೀಲಾ ಸತೀಶ್, ಪಿ.ಕೆ. ನೀಲಮ್ಮ, ಪ್ರೇಮ ಮಂಜುನಾಥ್, ಬಿ.ಎನ್. ಭಾರತಿ, ಬಿ. ಯಶೋಧ, ಮೆಟಿಲ್ಡಾ ಲೋಬೋ, ಹೆಚ್.ಆರ್. ಪುಷ್ಪವಾಸು, ಪುಷ್ಪ ಐತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಪುಷ್ಪಲತಾ ಇದ್ದರು.