ಮೂರ್ನಾಡು, ಅ. ೧೧: ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ತೆಂಗಿನ ಕಾಯಿಗೆ ಗುಂಡು ಹೊಡೆಯುವುದರ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಪೊಲೀಸ್ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮೂರ್ನಾಡು ಸಮೀಪ ಅಂತರರಾಷ್ಟಿçÃಯ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಕ್ರೀಡೆಯ ಬೆಳವಣಿಗೆಗೆ ಪೂರಕವಾಗಿದೆ. ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಹಬ್ಬದ ದಿನದಂದು ಎಲ್ಲರೂ ಒಟ್ಟಾಗಿ ಸೇರಿ, ಕ್ರೀಡಾ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಹೇಳಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂರ್ನಾಡಿನ ಪಶು ವೈದ್ಯಾಧಿಕಾರಿ ಡಾ. ಶಿಲ್ಪ ಯಂಕನ ಮಾತನಾಡಿ, ಒಂದು ಸಂಘವು ಶತಮಾನೋತ್ಸವ ಆಚರಿಸಿಕೊಂಡಿದೆ ಎಂದರೆ ಅಲ್ಲಿ ವ್ಯವಸ್ಥಿತವಾದ ಆಡಳಿತ, ಸಂಘಟನೆ ಇದ್ದಾಗ ಮಾತ್ರ ಸಾಧ್ಯ. ಇಂತಹ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ, ಭಾಗವಹಿಸುವಿಕೆ ಮನಸ್ಸಿಗೆ ಸಂತೋಷವನ್ನು ತಂದುಕೊಡುತ್ತದೆ.

ಸೋಲು - ಗೆಲುವು ಆನಂತರದ ವಿಷಯವಾಗುತ್ತದೆ ಎಂದು ಹೇಳಿದರು. ವಿವಿಧ ಹಂತದ ಓಟದ ಸ್ಪರ್ಧೆಗಳು, ಭಾರದ ಗುಂಡು ಎಸೆತ, ನಿಂಬೆಹಣ್ಣು ಚಮಚ ಓಟ, ವಯಸ್ಕರ ಓಟ, ಕಾಲುಕಟ್ಟಿ ಓಟ, ವಾದ್ಯ ಕುಣಿತ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾಂತೂರು - ಮೂರ್ನಾಡು ಗ್ರಾಮ ಪಂಚಾಯಿತಿಗೆ ಸಂಬAಧಪಟ್ಟ ಆರು ಗ್ರಾಮಗಳ ತಂಡಗಳ ಮಧ್ಯೆ ನಡೆದ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಬಾಡಗ ಗ್ರಾಮ ತಂಡವು ಕಿಗ್ಗಾಲು ಗ್ರಾಮ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಮಹಿಳೆಯರ ಹಗ್ಗಜಗ್ಗಾಟದಲ್ಲಿ ಕಿಗ್ಗಾಲು ತಂಡವು ಬಾಡಗ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿ ಕೊಂಡಿತು. ಸಾರ್ವಜನಿಕರಿಗೆ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಮುಂಡAಡ ಬೋಪಣ್ಣ (ಪ್ರಥಮ), ಕುಂಜಿಲAಡ ದಿಲನ್ ದೇವಯ್ಯ (ದ್ವಿತೀಯ), ಬಡುವಂಡ ಮುತ್ತಪ್ಪ (ತೃತೀಯ) ಬಹುಮಾನ ಗಳನ್ನು ಪಡೆದು ಕೊಂಡರು. ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಿದ್ದರು.

ವೇದಿಕೆಯಲ್ಲಿ ಕ್ಲಬ್‌ನ ಗೌರವ ಕಾರ್ಯದರ್ಶಿ ಮೇರ್ಕಜೆ ಲೋಹಿತ್ ಸೋಮಯ್ಯ, ನಿರ್ದೇಶಕರುಗಳಾದ ಪುದಿಯೊಕ್ಕಡ ಪೊನ್ನು ಮುತ್ತಪ್ಪ, ಮೂಡೇರ ಮನು ಮಾದಪ್ಪ, ಕೋಟೆರ ಮೇದಪ್ಪ, ಬೈಲೆ ತಿಮ್ಮಯ್ಯ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಪೆಮ್ಮಂಡ ಪವಿತ್ರ, ಕ್ಲಬ್‌ನ ಮಾಜಿ ಅಧ್ಯಕ್ಷರುಗಳಾದ ಚೇನಂಡ ಅಶೋಕ್, ಪಳಂಗAಡ ಅಪ್ಪಣ್ಣ ಮತ್ತು ಪುದಿಯೊಕ್ಕಡ ಬೆಲ್ಲು ಸೋಮಯ್ಯ ಉಪಸ್ಥಿತರಿದ್ದರು. ಮೂಡೇರ ಹರೀಶ್ ಕಾಳಯ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಚಿತ್ರ ವರದಿ: ಟಿ.ಸಿ. ನಾಗರಾಜ್, ಮೂರ್ನಾಡು.