ಮೂರ್ನಾಡು, ಅ. ೧೧: ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ೧೭ನೇ ವರ್ಷದ ಓಣಂ ಹಬ್ಬಾಚರu ಅತ್ಯಂತ ವಿಜೃಂಭಣೆಯಿAದ ಜರುಗಿತು. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂಗಳು ತಮ್ಮ ತಮ್ಮಲ್ಲಿಯೇ ಆಚಾರ-ವಿಚಾರಗಳು ಬೇರೆ ಬೇರೆಯಾಗಿದ್ದರೂ ಎಲ್ಲರೂ ಒಂದಾಗಿ, ಒಗ್ಗಟಾಗಿ ಸೇರಿದಾಗ ಹಿಂದೂ ಸಮಾಜ ಭದ್ರಗೊಳ್ಳುತ್ತದೆ. ಕೇರಳ ಸಮಾಜದೊಂದಿಗೆ ಕೊಡಗಿನ ನಂಟು ಅಧ್ಯಾತ್ಮಿಕವಾಗಿ ಹಿಂದಿನಿAದಲೂ ಬೆಸೆದುಕೊಂಡಿದೆ. ಕೇರಳ ಸಮಾಜದವರು ಶ್ರಮಜೀವಗಳು ಮತ್ತು ಬುದ್ದಿವಂತರಾಗಿದ್ದು, ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿರುತ್ತಾರೆ.

ಎಲ್ಲರೂ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟು, ಕೇಂದ್ರ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಮಾತನಾಡಿ, ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳನ್ನು ಪರಿಪಾಲನೆ ಮಾಡಿದಲ್ಲಿ ನಮ್ಮ ಮಕ್ಕಳಿಗೆ ಅದರ ಬಗ್ಗೆ ಅರಿವು ಮೂಡುತ್ತದೆ. ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದಾಗ, ಮಕ್ಕಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ಹೇಳಿದರು.

ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್, ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್ ಹಾಗೂ ಮಡಿಕೇರಿ ಕೆ.ಎನ್.ಎಸ್.ಎಸ್.ನ ಅಧ್ಯಕ್ಷ ಕೆ.ಕೆ. ಹರೀಶ್‌ಕುಮಾರ್ ಮಾತನಾಡಿದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಮಡಿಕೇರಿ ಎಸ್.ಎನ್.ಡಿ.ಪಿ. ಅಧ್ಯಕ್ಷ ಟಿ.ಆರ್. ವಾಸುದೇವ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಮಡಿಕೇರಿ ತಾಲೂಕು ಎಸ್.ಎನ್.ಡಿ.ಪಿ.ಯ ಅಧ್ಯಕ್ಷ ವಾಸುದೇವನ್, ಹೊದ್ದೂರುಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ. ಹಂಸ ಹೊದವಾಡ, ವೇದಿಕೆಯಲ್ಲಿ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ. ಕೆ. ಸುಧೀರ್ ಮತ್ತು ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ೧೦ನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು. ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಮತ್ತು ಪಾರಾಣೆಯ ಮಾಜಿ ಸೈನಿಕ ಸಂಜು ಅವರನ್ನು ಸನ್ಮಾನಿಸಲಾಯಿತು.

ಸಮಾರಂಭಕ್ಕೂ ಮುನ್ನ ಮೂರ್ನಾಡಿನ ಮುಖ್ಯಬೀದಿಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆ ಸಾಗಲಾಯಿತು. ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ. ಸಂತೋಷ್‌ಕುಮಾರ್ ನಿರೂಪಿಸಿ, ವಂದಿಸಿದರು.