ಸಿದ್ದಾಪುರ, ಅ. ೧೧: ವೀರಾಜ ಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಅರಮೇರಿ ಗ್ರಾಮದ ಕಾಫಿ ತೋಟದೊಳಗೆ ಹುಲಿಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತ ರಾಗಿದ್ದಾರೆ. ಅರಮೇರಿ ಗ್ರಾಮದ ಪೊಯ್ಯೆಟಿರ ಕಾಫಿ ತೋಟದೊಳಗೆ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಈ ಬಗ್ಗೆ ಕಾಫಿ ತೋಟದ ಮಾಲೀಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ೪ಏಳನೇ ಪುಟಕ್ಕೆ (ಮೊದಲ ಪುಟದಿಂದ) ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ರಾಘವ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಡಾನೆಗಳ ಹಾವಳಿಯಿಂದಾಗಿ ತತ್ತರಿಸಿರುವ ಈ ಭಾಗದ ಗ್ರಾಮಸ್ಥರು ಇದೀಗ ಹುಲಿ ಹೆಜ್ಜೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವನ್ಯಪ್ರಾಣಿಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದ್ದಾರೆ.
ಹುಲಿಹೆಜ್ಜೆ ಪತ್ತೆಯಾದ ಸ್ಥಳದ ಸುತ್ತಮುತ್ತಲು ಕಾರ್ಯಾಚರಣೆ ನಡೆಸುವಂತೆ ಸಿಬ್ಬಂದಿಗಳಿಗೆ ವಲಯ ಅರಣ್ಯ ಅಧಿಕಾರಿ ಶಿವರಾಂ ಸೂಚನೆ ನೀಡಿದ್ದಾರೆ. ಸಂಜೆ ಸಮಯದಲ್ಲಿ ಗಸ್ತು ತಿರುಗಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.