ಮಡಿಕೇರಿ, ಅ. ೧೧: ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಸಚಿವ ಈಶ್ವರ್ಖಂಡ್ರೆ ಅವರೊಂದಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದ್ದರು.
ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ೨೦೨೪ನೇ ಸಾಲಿನ ಶಕ್ತಿ ಪ್ರಧಾನ ಸಮಾರಂಭ ಹಾಗೂ ೭೧ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅರಣ್ಯ ಇಲಾಖೆಯಲ್ಲಿ ಅಮೋಘ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವಿಸಿ ಪದಕ ನೀಡಲಾಯಿತು. ಕಾರ್ಯಕ್ರಮದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ, ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ನಾಸಿರ್ ಅಹ್ಮದ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.