ಮಡಿಕೇರಿ, ಅ. ೧೧: ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೆ ಪೌರಸಿಬ್ಬಂದಿಗಳ ಮೂಲಕ ನಗರದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್. ರಮೇಶ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕಾರ್ಯಕ್ರಮದಲ್ಲಿ ಪೌರ ಸಿಬ್ಬಂದಿಗಳಾದ ಅಹಮ್ಮದ್ ಕಬೀರ್, ಹೆಚ್.ಆರ್. ಶಂಕರ್, ಈರಪ್ಪ ಶೆಟ್ಟಿ, ವಸಂತ ಕುಮಾರ್, ಬಿ.ಟಿ. ಜಗದೀಶ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಸ್ವಚ್ಛತೆ ಸಂಬAಧ ಜನರಲ್ಲಿ ಹೆಚ್ಚು ಅರಿವು ಮೂಡಿದೆ. ನಗರದ ತ್ಯಾಜ್ಯ ವಿಲೇವಾರಿ ಮಾಡುವ ಪೌರಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ನಗರಸಭೆ ಹೆಚ್ಚಿನ ಕಾಳಜಿ ವಹಿಸಿದೆ. ಈಗಾಗಲೇ ಮಡಿಕೇರಿಯ ರಾಜರಾಜೇಶ್ವರಿ ಬಡಾವಣೆಯಲ್ಲಿ ಪೌರ ಸಿಬ್ಬಂದಿಗಳಿಗೆ ೧೨ ಮನೆಗಳನ್ನು ನಿರ್ಮಿಸಿ ಉಚಿತವಾಗಿ ವಿತರಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ರಮೇಶ್ ಹೇಳಿದರು. ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಎಚ್.ಟಿ. ಮಾತನಾಡಿ, ದಸರಾ ಸಂದರ್ಭ ಪೌರಸಿಬ್ಬಂದಿಗಳು ಮಡಿಕೇರಿಯನ್ನು ಸ್ವಚ್ಛವಾಗಿಡು ವಲ್ಲಿ ವಹಿಸಿದ ಶ್ರಮ ಶ್ಲಾಘನೀಯ. ಪೌರಸಿಬ್ಬಂದಿಗಳ ಅವಿರತ ಶ್ರಮದಿಂದಾಗಿಯೇ ಮಡಿಕೇರಿ ತನ್ನ ಸೌಂದರ್ಯ ಕಾಪಾಡಿಕೊಳ್ಳಲು ಸಾಧ್ಯವಾಗಿದೆ.
ಪೌರಸಿಬ್ಬಂದಿಗಳು, ಕುಟುಂಬ ವರ್ಗದವರಿಗೆ ರೋಟರಿ ಸಂಸ್ಥೆಯ ಮೂಲಕ ಆರೋಗ್ಯ ಶಿಬಿರ ಆಯೋಜಿತವಾಗಬೇಕೆಂದು ಸಲಹೆ ನೀಡಿದರು. ರೋಟರಿ ವುಡ್ಸ್ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಭೂಮಿ ತಾಯಿಯ ಮಡಿಲಲ್ಲಿ ತ್ಯಾಜ್ಯ ಎಸೆಯುವ ಜನರು ಹೆಚ್ಚಾಗುತ್ತಿರುವ ಸಂದರ್ಭ ದಲ್ಲಿ ಅಂತಹ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ನಿಸರ್ಗ ಮಾತೆಯನ್ನು ಸ್ವಚ್ಛಗೊಳಿಸುವ ಅಮೂಲ್ಯ ಕಾಯಕದಲ್ಲಿ ಪೌರಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಮಡಿಕೇರಿಯ ಪೌರಸೇವಾ ಸಿಬ್ಬಂದಿಗಳ ಕಾರ್ಯನಿಷ್ಟೆಯ ಬಗ್ಗೆ ಪ್ರಶಂಸಿಸಿದರು. ರೋಟರಿ ವಲಯ ೬ ರ ಸಹಾಯಕ ಗವರ್ನರ್ ದಿಲನ್ ಚಂಗಪ್ಪ ಮಾತನಾಡಿ, ತ್ಯಾಜ್ಯ ವಿಲೇವಾರಿ ಮಾಡುವ ಸಂಬAಧ ವಿದ್ಯಾರ್ಥಿಗಳಲ್ಲಿ ಸೂಕ್ತ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮಗಳನ್ನು ಸಾಮಾಜಿಕ ಸಂಘ-ಸAಸ್ಥೆಗಳು ಹೆಚ್ಚು ಮಾಡಬೇಕೆಂದು ಕರೆ ನೀಡಿದರು.
ವಲಯ ಸೇನಾನಿ ಕಾರ್ಯಪ್ಪ ಮಾತನಾಡಿ, ಸಕ್ರಿಯ ಸೇವೆಯ ಮೂಲಕ ಸಮಾಜದ ಸ್ವಚ್ಛತೆಗೆ ಕಾರಣ ರಾಗುತ್ತಿರುವ ಪೌರ ಸಿಬ್ಬಂದಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮೆಚ್ಚುವಂತದ್ದು ಎಂದರು. ರೋಟರಿ ವುಡ್ಸ್ ಕಾರ್ಯದರ್ಶಿ ಪ್ರಮೀಳಾ ಶೆಟ್ಟಿ ವಂದಿಸಿದ ಕಾರ್ಯಕ್ರಮದಲ್ಲಿ ವುಡ್ಸ್ ಸಂಸ್ಥೆಯ ಸಲಹೆಗಾರ ಮೋಹನ್ ಪ್ರಭು, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾರ್ಯದರ್ಶಿ ಬಿ.ಕೆ. ಕಾರ್ಯಪ್ಪ ಹಾಜರಿದ್ದರು. ವಸಂತ್ ಕುಮಾರ್ ನಿರೂಪಿಸಿದರು.