ಮಡಿಕೇರಿ ಅ. ೧೨: ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋ ಸಿಯೇಷನ್‌ನಿಂದ ಹಲವಾರು ಸಂಘ-ಸAಸ್ಥೆಗಳ ಸಹಯೋಗದಲ್ಲಿ ತಾ. ೧೫ ರಂದು ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು - ಸುಂದರ ಕೊಡಗು - ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೮ ಗಂಟೆಯಿAದ ಕೊಡಗಿನಾದ್ಯಂತ ರಸ್ತೆ ಬದಿಗಳಲ್ಲಿನ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಹೊಣೆಯರಿತ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ, ಕೊಡಗು ಹೋಂಸ್ಟೇ ಅಸೋಸಿಯೇಷನ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಟ್ರಾವಲ್ ಅಸೋಸಿಯೇಷನ್, ರೋಟರಿ, ಲಯನ್ಸ್, ರೆಡ್‌ಕ್ರಾಸ್, ಗ್ರೀನ್ ಸಿಟಿ ಫೋರಂ, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವಾರು ಸಂಘ-ಸAಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯ ಹಲವಾರು ಸಂಸ್ಥೆಗಳು ಈ ಸ್ವÀಚ್ಛತಾ ಅಭಿಯಾನಕ್ಕೆ ಕೈಜೋಡಿಸಿವೆ ಎಂದು ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.

ಕೊಡಗಿನಾದ್ಯಂತ ಮುಖ್ಯರಸ್ತೆಗಳ ಇಕ್ಕೆಲಗಳೂ ಸೇರಿದಂತೆ ಇತರ ರಸ್ತೆಗಳ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಆ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೊಟೇಲ್, ರೆಸ್ಟೋರೆಂಟ್, ವರ್ತಕರು, ಸಂಘ-ಸAಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳ ಸಹಕಾರದಲ್ಲಿ ವಿಲೇವಾರಿ ೪ಐದÀನೇ ಪುಟಕ್ಕೆ ಮಾಡಿ ಸ್ವಚ್ಚತೆಯ ಸಂದೇಶವನ್ನು ಸಾರಲಾಗುತ್ತದೆ. ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ಇಂತÀಹ ಬೃಹತ್ ಸ್ವಚ್ಛತಾ ಅಭಿಯಾನ ಏಕದಿನ, ಏಕಕಾಲದಲ್ಲಿ ಆಯೋಜಿಸಲ್ಪಟ್ಟಿದೆ ಎಂದು ದಿನೇಶ್ ತಿಳಿಸಿದರು.

ಕೊಡಗನ್ನು ಸ್ವಚ್ಛತೆಯೊಂದಿಗೆ ಸುಂದರವಾಗಿಡುವಲ್ಲಿ ಪ್ರತಿಯೋರ್ವರ ಪಾಲು ಮಹತ್ವದ್ದಾಗಿದೆ. ಹೀಗಾಗಿ ಕೊಡಗಿನ ಪ್ರತಿಯೊಬ್ಬರೂ ಕೊಡಗಿನ ಸ್ವಚ್ಛತೆಯ ಮೇಲಿನ ಕಾಳಜಿಯಿಂದ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ನಾಸಿರ್ ಅಹಮ್ಮದ್ ಕೋರಿದ್ದಾರೆ. ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಸಂಪರ್ಕಿಸಬೇಕಾದ ಸಂಖ್ಯೆ ದಿನೇಶ್ ಕಾರ್ಯಪ್ಪ. ೯೮೪೪೧ ೬೮೨೨೩, ನಾಸಿರ್ ಅಹಮದ್ ೮೭೬೨೩ ೪೫೮೭೯.