ಮಡಿಕೇರಿ ಅ. ೧೨: ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ.

ಸೌಜನ್ಯ ಪ್ರಕರಣ ನಡೆದು ೧೩ ವರ್ಷಗಳೇ ಕಳೆದಿದ್ದರೂ ನೈಜ ಆರೋಪಿಗಳನ್ನು ಬಂಧಿಸಲು ಆಡಳಿತ ವ್ಯವಸ್ಥೆಯಿಂದ ಸಾಧ್ಯವಾಗಿಲ್ಲ.

ಆದ್ದರಿಂದ ವೇದಿಕೆ ಮೂಲಕ ರಾಜ್ಯವ್ಯಾಪಿ ‘ನ್ಯಾಯಕ್ಕಾಗಿ ಜನಾಗ್ರಹ ಕಾರ್ಯಕ್ರಮ’ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರ ಮೂಲಕ ಮನವಿ ಸಲ್ಲಿಸಿರುವುದಾಗಿ ವೇದಿಕೆಯ ಪ್ರಮುಖರು ಹಾಗೂ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ತಿಳಿಸಿದರು.

ರೈತ ಸಂಘದ ಮುಖಂಡರಾದ ನೆರವಂಡ ಉಮೇಶ್, ಹಮೀದ್, ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಪದ್ಮಿನಿ ಶ್ರೀಧರ್, ಕಟ್ಟಡ ಕಾರ್ಮಿಕ ಸಂಘದ ಎ.ಸಿ. ಸಾಬು, ಕಾರ್ಮಿಕ ಮುಖಂಡ ಸಾಜಿ ರಮೇಶ್, ತೋಟ ಕಾರ್ಮಿಕ ಸಂಘಟನೆಯ ಮುಖಂಡ ಹೆಚ್.ಬಿ. ರಮೇಶ್, ಆದಿವಾಸಿ ಸಂಘಟನೆಯ ಮುಖಂಡರಾದ ಪ್ರೇಮ, ಡಿವೈಎಫ್‌ಐ ಮುಖಂಡ ಸಾಧಿಕ್ ಮನವಿ ನೀಡುವ ಸಂದರ್ಭ ಹಾಜರಿದ್ದರು.