ವೀರಾಜಪೇಟೆ, ಅ. ೧೨: ವೀರಾಜಪೇಟೆ ಸರಕಾರಿ ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಸಕರು, ಕಾಲೇಜಿನಲ್ಲಿ ನಡೆಯುತ್ತಿರುವ ಪ್ರಗತಿಯ ಬಗ್ಗೆ ವರದಿಗಳನ್ನು ಪರಿಶೀಲಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳೊಂದಿಗೆ ಚರ್ಚಿಸಿದ ಶಾಸಕರು ವಿದ್ಯಾರ್ಥಿಗಳ ಓದಿನ ದೃಷ್ಟಿಯಲ್ಲಿ ಹಾಗೂ ಇತರ ಚಟುವಟಿಕೆಗಳ ಕುರಿತು ಬೇಕಾದಂತಹ ಎಲ್ಲಾ ಸವಲತ್ತುಗಳ ಬಗ್ಗೆ ವಿವರಗಳನ್ನು ಪಡೆದು ಸಲಹೆಗಳನ್ನು ನೀಡಿದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸರಸ್ವತಿ, ಸಮಿತಿ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ, ಸಮಿತಿ ಪದಾಧಿಕಾರಿಗಳು, ಪುರಸಭೆ ಅಧ್ಯಕ್ಷೆ ದೇಚಮ್ಮ, ಸದಸ್ಯರಾದ ಮಹಮ್ಮದ್ ರಾಫಿ, ಎಸ್.ಹೆಚ್. ಮತೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.