ಸೋಮವಾರಪೇಟೆ, ಅ. ೧೨: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವಿಶ್ವ ಕುಂಬೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸಂಘದ ೨೦೨೫-೨೦೨೮ರ ಸಾಲಿನ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಸಾಲಿನ ಅಧ್ಯಕ್ಷರನ್ನಾಗಿ ವಿಶ್ವ ಕುಂಬೂರು, ಉಪಾಧ್ಯಕ್ಷರಾಗಿ ಎಸ್.ಡಿ. ವಿಜೇತ್, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಕೆ. ಭಾಸ್ಕರ್, ಖಜಾಂಚಿಯಾಗಿ ಬಿ.ಎ. ಭಾಸ್ಕರ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರುಗಳಾಗಿ ವಿಜಯ್ ಹಾನಗಲ್ಲು, ಚೆರಿಯಮನೆ ಸುರೇಶ್, ಹಿರಿಕರ ರವಿ, ದಿನೇಶ್ ಮಾಲಂಬಿ, ಲಕ್ಷಿö್ಮÃಕಾಂತ್ ಕೊಮಾರಪ್ಪ ಆಯ್ಕೆಯಾದರು.

ಸೋಮವಾರಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಪಿ. ರವೀಂದ್ರ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ನವೀನ್ ಸುವರ್ಣ ವೀಕ್ಷಕರಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವಿಜಯ್ ಹಾನಗಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಶ್ವ ಕುಂಬೂರು ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಮಾತನಾಡಿದ ವಿಶ್ವಕುಂಬೂರು ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ವ ಸದಸ್ಯರ ಸಹಕಾರದಿಂದ ಕೆಲಸ ಮಾಡಲಾಗುವುದು ಎಂದರು.