ವೀರಾಜಪೇಟೆ, ಅ. ೧೨: ವೀರಾಜಪೇಟೆಯ ನಂ. ೩೭೧ ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತÀ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದರು. ಮಹಿಳಾ ಸದಸ್ಯರು ದೇವರ ನಾಮ ಹಾಗೂ ಭಜನೆ ಮಾಡಿದರು. ಪೂಜೆಯ ಬಳಿಕ ನೆರೆದ ಸದಸ್ಯರುಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭ ಮಹಿಳಾ ಸಹಕಾರ ಸಂಘದ ಅಧ್ಯಕ್ಷ ಪಟ್ರಪಂಡ ಗೀತಾ ಬೆಳ್ಯಪ್ಪ, ಉಪಾಧ್ಯಕ್ಷೆ ಬಿ.ಆರ್. ಸಬಿತ, ನಿರ್ದೇಶಕರಾದ ಆಶಾ ಚಿಣ್ಣಪ್ಪ, ಯು.ಕೆ. ಪೊನ್ನಮ್ಮ, ಕುಸುಮ ಸೋಮಣ್ಣ, ಜಯಲೀಲಾ ಸತೀಶ್, ಪಿ.ಕೆ. ನೀಲಮ್ಮ, ಪ್ರೇಮ ಮಂಜುನಾಥ್, ಬಿ.ಎನ್. ಭಾರತಿ, ಬಿ. ಯಶೋಧ, ಹೆಚ್.ಆರ್. ಪುಷ್ಪವಾಸು, ಪುಷ್ಪ ಐತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಪುಷ್ಪಲತಾ ಸೇರಿದಂತೆ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.