ವೀರಾಜಪೇಟೆ, ಅ. ೧೨: ವೀರಾಜಪೇಟೆಯ ಲಾರಿ ಮಾಲೀಕರು ಹಾಗೂ ಚಾಲಕರ ಸಂಘದವರು ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರು.

ಶಾಸಕರ ಗೃಹ ಕಚೇರಿಗೆ ತೆರಳಿದ ಸಂಘದವರು ವೀರಾಜಪೇಟೆ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಸಾಮಗ್ರಿ ಹಾಗೂ ಇತರ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಇದರಿಂದಾಗಿ ಸರಕಾರಕ್ಕೆ ಮಾತ್ರವಲ್ಲದೆ ಅಧಿಕೃತ ಲಾರಿ ವ್ಯವಹಾರಕ್ಕೂ ತೊಂದರೆಯಾಗುತ್ತದೆ ಎಂದು ಶಾಸಕರ ಗಮನಕ್ಕೆ ತಂದರು.

ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು ಸಂಬAಧಿಸಿದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರುಗಳಾದ ಎಸ್.ಹೆಚ್. ಮತೀನ್, ಮಹಮ್ಮದ್ ರಾಫಿ ಹಾಗೂ ಲಾರಿ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳಾದ ಸುಮಂತ್, ವಲ್ಸನ್, ಸಲೀಂ, ರಿಜ್ವಾನ್, ಪಳನಿ, ರಾಜಿಕ್, ರೆಹಮಾನ್, ವಾಜಿದ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.